
ನೇಸರ ಫೆ.13: 2021-22ನೇ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ಅತಿಥಿ ಉಪನ್ಯಾಸಕರ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ಈಗಾಗಲೇ ಮೊದಲನೇ ಸುತ್ತಿನ ಕೌನ್ಸಿಲಿಂಗ್ ಮೂಲಕ ಬಹುತೇಕ ಅಭ್ಯರ್ಥಿಗಳು ನೇಮಕ ಗೊಂಡಿದ್ದಾರೆ. ಆದರೆ ಕೆಲವು ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವಾಗ ತಪ್ಪು ಮಾಹಿತಿಗಳನ್ನು ನೀಡಿದ್ದು, ಅವರಿಗೆ ಮಾಹಿತಿ ತಿದ್ದುಪಡಿ ಮಾಡಿಕೊಳ್ಳಲು 2 ದಿನ ಕಾಲಾವಕಾಶ ಮಾಡಿಕೊಡಲಾಗಿದೆ.
ಅತಿಥಿ ಉಪನ್ಯಾಸಕರ ಹುದ್ದೆಗಳ ನೇಮಕಕ್ಕೆ ಈಗಾಗಲೇ ಮೊದಲನೇ ಸುತ್ತಿನ ಕೌನ್ಸೆಲಿಂಗ್ ಮುಗಿದಿದ್ದು, ಆಯ್ಕೆಯಾಗಿರುವ ಬಹುತೇಕರು ಕರ್ತವ್ಯಕ್ಕೆ ವರದಿ ಮಾಡಿಕೊಂಡಿದ್ದಾರೆ. ಆದರೆ, ಕೆಲವರು ಅರ್ಜಿ ಸಲ್ಲಿಸುವಾಗ ಸೇವಾ ಅನುಭವ ವಿವರ, ಸ್ನಾತಕೋತ್ತರ ಪದವಿ ಅಂಕಗಳು, ಪಿಎಚ್.ಡಿ/ಎಂ.ಫಿಲ್ ಪದವಿಗೆ ಸಂಬಂಧಿಸಿದ ವಿವರಗಳನ್ನು ತಪ್ಪಾಗಿ ತುಂಬಿದ್ದು, ಇವುಗಳನ್ನು ಸರಿಪಡಿಸಿಕೊಳ್ಳಲು ಮನವಿ ಮಾಡಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಎರಡು ದಿನ ಅವಕಾಶ ಕೊಡಲಾಗುತ್ತಿದೆ.