
ಬಣಕಲ್-ಕೊಟ್ಟಿಗೆಹಾರ ನಡುವೆ ಶುಕ್ರವಾರ ಮಧ್ಯಾಹ್ನ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ದಾರುಣವಾಗಿ ಸಾವನ್ನಪ್ಪಿದ್ದಾರೆ.
ಮೆಸ್ಕಾಂ ಲಾರಿ ಮತ್ತು ಓಮ್ನಿ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ್ದು, ಹಿಂಬದಿಯಲ್ಲಿದ್ದ ಆಲ್ಟೋ ಕೂಡ ಓಮ್ನಿ ಗೆ ಗುದ್ದಿ ಸರಣಿ ಅಪಘಾತ ನಡೆದಿದೆ.
ಓಮ್ನಿಯಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.
ಓಮ್ನಿ ಮತ್ತು ಆಲ್ಟೋ ಕಾರಿನಲ್ಲಿದ್ದವರು ಧರ್ಮಸ್ಥಳದಿಂದ ಚಿತ್ರದುರ್ಗಕ್ಕೆ ತೆರಳುತ್ತಿದ್ದರು, ಮೆಸ್ಕಾಂ ಲಾರಿ ಮೂಡಿಗೆರೆಯಿಂದ ಕೊಟ್ಟಿಗೆಹಾರಕ್ಕೆ ಹೋಗುತ್ತಿತ್ತು ಎಂದು ತಿಳಿದು ಬಂದಿದೆ.






