
ಕೊಕ್ಕಡ:ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೇ. 25ರ ಶನಿವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾದರು.
ಮೊದಲು ಶ್ರೀಮಂಜುನಾಥ ಸ್ವಾಮಿ ದರ್ಶನ ಪಡೆದು ವಿಶೇಷ ಸೇವೆ ಸಲ್ಲಿಸಿದರು. ಕ್ಷೇತ್ರದ ವತಿಯಿಂದ ಮುಖ್ಯಮಂತ್ರಿಯವರನ್ನು ಡಿ.ಹರ್ಷೇಂದ್ರ ಕುಮಾರ್ ಸ್ವಾಗತಿಸಿದರು. ಭವ್ಯ ಮೆರವಣಿಗೆಯೊಂದಿಗೆ ಕ್ಷೇತ್ರಕ್ಕೆ ಬರಮಾಡಿಕೊಳ್ಳಲಾಯಿತು.
ಸಿಎಂ ಜತೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಮಹದೇವಪ್ಪ, ಬೈರತಿ ಸುರೇಶ್, ಗೋವಿಂದ ರಾಜು ಸಾಥ್ ಭಾಗಿಯಾಗಿದ್ದರು.
ಸರಕಾರಕ್ಕೆ ಒಂದು ವರ್ಷ ತುಂಬಿದ ಹಿನ್ನಲೆ ಧರ್ಮಸ್ಥಳಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಸಂಜೆ ಮಂಗಳೂರು ನಗರದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಸಿಎಂ, ಡಿಸಿಎಂ ಭಾಗಿಯಾಗಲಿದ್ದಾರೆ.






