ಕುಕ್ಕೆ ಮಹಾವಿದ್ಯಾಲಯದ ವಾರ್ಷಿಕೋತ್ಸವ ಸಮಾರಂಭ

ಶೇರ್ ಮಾಡಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಮೇ.28ರಂದು ವಾರ್ಷಿಕೋತ್ಸವ ಸಮಾರಂಭ ನೆರವೇರಿತು.

ಪುತ್ತೂರು ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ನ ಸಹಾಯಕ ಪ್ರಾಧ್ಯಾಪಕ ಡಾ.ನರೇಂದ್ರ ರೈ ದೇರ್ಲ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ವಿದ್ಯಾರ್ಥಿಗಳು ಜೀವನೋತ್ಸಾಹ ಬೆಳೆಸಿಕೊಳ್ಳಬೇಕು. ಪುಸ್ತಕಗಳು ಜ್ಞಾನದ ಸಾಗರ, ವಿದ್ಯಾರ್ಥಿಗಳಲ್ಲಿ ಜ್ಞಾನದ ದಾಹ ಹೆಚ್ಚಬೇಕು ಎಂದು ನುಡಿದರು. ದೇವಳದ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಪದನಿಮಿತ್ತ ಕಾರ್ಯದರ್ಶಿ ಡಾ. ನಿಂಗಯ್ಯ ಇವರು ಉಪಸ್ಥಿತರಿದ್ದರು.

ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ದಿನೇಶ ಪಿ.ಟಿ ಇವರು ಅಧ್ಯಕ್ಷತೆಯನ್ನು ವಹಿಸಿದರು. ಮಹಾವಿದ್ಯಾಲಯದ ಆಂತರಿಕ ಗುಣಮಟ್ಟ ಭರವಸಕೋಶದ ಸಂಯೋಜಕ ಲತಾ ಬಿ.ಟಿ, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಆನಂದ ಎಚ್.ಟಿ, ಪ್ರಾಕ್ತನ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಣೇಶ್ ಪ್ರಸಾದ, ವಿದ್ಯಾರ್ಥಿ ಪರಿಷತ್ತಿನ ಅಧ್ಯಕ್ಷ ಸುಹಾಸ್.ಎಂ.ಜಿ, ಉಪಾಧ್ಯಕ್ಷ ಕುಮಾರಿ ಪೂಜಾ, ಕಾರ್ಯದರ್ಶಿ ಕೌಶಿಕ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಮಾರಂಭದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ವಾರ್ಷಿಕ ಪರೀಕ್ಷೆಯಲ್ಲಿ, ವಿಶ್ವವಿದ್ಯಾನಿಲಯ ಮಟ್ಟದಲ್ಲಿ ಮಹಾವಿದ್ಯಾಲಯದ ಅಂತಿಮ ಬಿ ಬಿ ಎ ಪದವಿಯ ವಿದ್ಯಾರ್ಥಿನಿ ಸಿಂಧೂರ 5ನೇ ಸ್ಥಾನ ಹಾಗೂ ಅಂತಿಮ ಬಿಕಾಂ ಪದವಿಯ ಶ್ರಾವ್ಯ 10ನೇ ಸ್ಥಾನ ಗಳಿಸಿದ ಇವರನ್ನು ಗೌರವಿಸಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ದೇವಳದಿಂದ ವಿದ್ಯಾರ್ಥಿ ವೇತನ ಹಾಗೂ ವಿವಿಧ ದತ್ತಿ ನಿಧಿಗಳನ್ನು ವಿತರಿಸಲಾಯಿತು. ಮಹಾವಿದ್ಯಾಲಯದ ಇತಿಹಾಸ ವಿಭಾಗದ ಮುಖ್ಯಸ್ಥ ಡಾ.ಪ್ರಸಾದ ಎನ್ ಸ್ವಾಗತಿಸಿದರು, ಕನ್ನಡ ವಿಭಾಗದ ಮುಖ್ಯಸ್ಥ ಉದಯಕುಮಾರ್ ವಂದಿಸಿದರು, ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಮನೋಹರ ನಿರೂಪಿಸಿದರು.

Leave a Reply

error: Content is protected !!