ಆಲoಕಾರು ಉಚಿತ ನೇತ್ರ ಚಿಕಿತ್ಸೆ, ಶಸ್ತ್ರಚಿಕಿತ್ಸೆ ಮತ್ತು ಕನ್ನಡಕ ವಿತರಣಾ ಶಿಬಿರ

ಶೇರ್ ಮಾಡಿ

ನೆಲ್ಯಾಡಿ: ಲಯನ್ಸ್ ಕ್ಲಬ್ ಅಲಂಕಾರು ದುರ್ಗಾಂಬಾ, ಮನವಳಿಕೆ ಗುತ್ತು ಕುಟುಂಬ ದೈವ ದೇವರುಗಳ ಸೇವಾ ಟ್ರಸ್ಟ್ ಮತ್ತು ಅಶ್ವಿನಿ ಒಪ್ಟಿಕಲ್ಸ್ ಕಡಬ ಇದರ ಆಶ್ರಯದಲ್ಲಿ ಆನಂದಾಶ್ರಮ ಸೇವಾ ಟ್ರಸ್ಟ್ ಪುತ್ತೂರು, ಜಿಲ್ಲಾ ಅಂದತ್ವ ನಿವಾರಣ ಸಂಸ್ಥೆ ಮಂಗಳೂರು, ವೆನ್ ಲಾಕ್ ಆಸ್ಪತ್ರೆ ಮಂಗಳೂರು, ಸಂಚಾರಿ ನೇತ್ರ ಚಿಕಿತ್ಸಾ ಘಟಕ ಮಂಗಳೂರು, ಪ್ರಾಥಮಿಕ ಆರೋಗ್ಯ ಕೇಂದ್ರ ಆತೂರು ಇವರ ಸಹಯೋಗದೊಂದಿಗೆ ಶ್ರೀ ದುರ್ಗಾಂಬಾ ಪ್ರೌಢಶಾಲೆಯಲ್ಲಿ ಉಚಿತ ನೇತ್ರ, ಶಸ್ತ್ರ ಚಿಕಿತ್ಸಾ ಶಿಬಿರ ಮತ್ತು ಅಶ್ವಿನಿ ಒಪ್ಟಿಕಲ್ಸ್ ಕಡಬ ಇದರ ವತಿಯಿಂದ ಉಚಿತ ಕನ್ನಡಕ ವಿತರಣೆ ಕಾರ್ಯಕ್ರಮ ನೆರವೇರಿತು.

ಅಲಂಕಾರು ಆದಿತ್ಯ ಕ್ಲಿನಿಕ್ ನ ವೈದ್ಯಾಧಿಕಾರಿ ಆಕಾಶ್ ಅವರು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ ಪಂಚೇಂದ್ರಿಯಗಳಲ್ಲಿ ಕಣ್ಣು ಅತ್ಯಂತ ಪ್ರಾಮುಖ್ಯತೆಯನ್ನು ಪಡೆದಿದೆ, ಕಣ್ಣಿನ ಸಂರಕ್ಷಣೆ ನಮ್ಮ ಆದ್ಯ ಕರ್ತವ್ಯವಾಗಿದೆ. ನೇತ್ರ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಇಂತಹ ಶಿಬಿರಗಳು ವರದಾನವಾಗಿದೆ ಈ ಶಿಬಿರ ಕಣ್ಣಿನ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಬೆಳಕಾಗಲಿ ಮತ್ತು ಇಂತಹ ಶಿಬಿರಗಳನ್ನು ಆಯೋಜಿಸಿದ ಲಯನ್ಸ್ ಕ್ಲಬ್ ಮತ್ತು ಎಲ್ಲಾ ಸಂಘ ಸಂಸ್ಥೆಗಳಿಗೆ ಅಭಿನಂದನೆಗಳು ಎಂದರು.

ಕಾರ್ಯಕ್ರಮದ ಮುಖ್ಯ ಅತಿಥಿ ಶ್ರೀ ದುರ್ಗಾಂಬಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮತ್ತು ಮನವಳಿಕೆ ಗುತ್ತು ಕುಟುಂಬ ದೈವ ದೇವರುಗಳ ಸೇವಾ ಟ್ರಸ್ಟ್ ನ ಅಧ್ಯಕ್ಷ ದಯಾನಂದ ರೈ ಮನವಳಿಕೆ ಗುತ್ತು ರವರು ಮಾತನಾಡಿ ಲಯನ್ಸ್ ಕ್ಲಬ್ ಅಲಂಕಾರು, ದುರ್ಗಾಂಬಾ ಸಂಸ್ಥೆಯು ಈ ಭಾಗದಲ್ಲಿ ಅನೇಕ ವೈದ್ಯಕೀಯ ಶಿಬಿರ, ಆರೋಗ್ಯ ಶಿಬಿರ ಚಿಕಿತ್ಸಾಹ ಶಿಬಿರಗಳನ್ನು ಸಂಘಟಿಸಿ ಅತ್ಯುತ್ತಮ ಸೇವೆಯನ್ನು ನೀಡುತ್ತಾ ಇದೆ. ನಮ್ಮ ಸಂಸ್ಥೆಯಲ್ಲಿ ಇಂತಹ ಶಿಬಿರಗಳನ್ನು ಏರ್ಪಡಿಸಿ ಸಾರ್ವಜನಿಕರಿಗೆ ಅನುಕೂಲವನ್ನು ಮಾಡಿಕೊಡುವುದರ ಜೊತೆಗೆ ಮಕ್ಕಳಲ್ಲಿ ಸೇವಾ ಮನೋಭಾವವನ್ನು ಮೂಡಿಸುವಲ್ಲಿ ಪ್ರೋತ್ಸಾಹವನ್ನು ನೀಡಿದೆ ಇಂತಹ ಸಮಾಜಮುಖಿ ಸೇವಾ ಕಾರ್ಯಗಳಿಗೆ ನಮ್ಮ ಸಂಸ್ಥೆಯ ಮೂಲಕ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದೇನೆ ಮತ್ತು ಶಿಬಿರದಲ್ಲಿ ಫಲಾನುಭವಿಗಳಿಗೆ ಉಚಿತ ಕನ್ನಡಕಗಳನ್ನು ವಿತರಿಸಿದ ಅಶ್ವಿನಿ ಒಪ್ಟಿಕಲ್ಸ್ ಕಡಬ ಇದರ ವೈದ್ಯಾಧಿಕಾರಿ ಡಾ.ಶಾಂತರಾಜ ಅವರಿಗೆ ಅಭಿನಂದನೆಗಳು ಎಂದರು.

ಅಧ್ಯಕ್ಷತೆಯನ್ನು ಲಯನ್ಸ್ ಸಂಸ್ಥೆಯ ಅಧ್ಯಕ್ಷ ಪ್ರಶಾಂತ್ ರೈ ಮನವಳಿಕೆಗುತ್ತು ಅವರು ಸಂಸ್ಥೆಯ ಕಾರ್ಯ ಚಟುವಟಿಕೆಗಳ ಬಗ್ಗೆ, ಸೇವಾ ಕಾರ್ಯಗಳ ಬಗ್ಗೆ ಮಾಹಿತಿಯನ್ನು ನೀಡಿದರು.

ಕಾರ್ಯಕ್ರಮದಲ್ಲಿ ದುರ್ಗಾಂಬಾ ಸಂಸ್ಥೆಯ ನಿವೃತ್ತ ಮುಖ್ಯ ಗುರು ಮತ್ತು ಲಯನ್ಸ್ ಸಂಸ್ಥೆಯ ಕಾರ್ಯದರ್ಶಿ ಶ್ರೀಪತಿ ರಾವ್ ಮತ್ತು ನೇತ್ರಾಧಿಕಾರಿ ಡಾ.ಶಾಂತ್ ರಾಜ್ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಗ್ರಾ.ಪಂ ಉಪಾಧ್ಯಕ್ಷ ರವಿ ಪೂಜಾರಿ, ವೆನ್ ಲಾಕ್ ಆಸ್ಪತ್ರೆಯ ನೇತ್ರ ತಜ್ಞೆ ಡಾ.ಪೂರ್ಣಿಮಾ ಉಪಸ್ಥಿತರಿದ್ದರು.

ಶಿಬಿರದಲ್ಲಿ ಸುಮಾರು 120 ಜನರು ನೇತ್ರ ತಪಾಸಣೆಯನ್ನು ಮಾಡಿಸಿದರು 100 ಫಲಾನುಭವಿಗಳಿಗೆ ಉಚಿತ ಕನ್ನಡಕಗಳನ್ನು ಅಶ್ವಿನಿ ಒಪ್ಟಿಕಲ್ಸ್ ಕಡಬ ಇವರಿಗೆ ಶಿಫಾರಸು ಮಾಡಲಾಯಿತು. 5 ಜನ ಫಲಾನುಭವಿಗಳು ಉಚಿತ ಪೊರೆ ಶಸ್ತ್ರ ಚಿಕಿತ್ಸೆಗೆ ಆಯ್ಕೆಗೊಂಡರು.

ಪ್ರಶಾಂತ್ ರೈ ಮನವಳಿಕೆಗುತ್ತು ಸ್ವಾಗತಿಸಿದರು, ನೆಲ್ಯಾಡಿ ವಲಯ ಬಂಟರ ಸಂಘದ ಮಾಜಿ ಅಧ್ಯಕ್ಷ ನಿತ್ಯಾನಂದ ಶೆಟ್ಟಿ, ಮನವಳಿಕೆಗುತ್ತು ವಂದಿಸಿದರು, 52ನೇ ನೇತ್ರ ಚಿಕಿತ್ಸಾಹ ಶಿಬಿರದ ಸಂಘಟಕ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಮಾಜ ಸೇವಕ ಗಂಗಾಧರ ಶೆಟ್ಟಿ ಹೊಸಮನೆ ಕಾರ್ಯಕ್ರಮ ನಿರೂಪಿಸಿದರು.

Leave a Reply

error: Content is protected !!