ಪಡುಬೆಟ್ಟು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಪ್ರಾರಂಭೋತ್ಸವ

ಶೇರ್ ಮಾಡಿ

ನೆಲ್ಯಾಡಿ: ಪಡುಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2024-25ನೇ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಿತು.

ಹೊಸದಾಗಿ ದಾಖಲಾದ ವಿದ್ಯಾರ್ಥಿಗಳಿಗೆ ಬಲೂನ್ ನೀಡಿ ಬ್ಯಾಂಡ್ , ವಾದ್ಯದೊಂದಿಗೆ ಮೆರವಣಿಗೆಯಲ್ಲಿ ಸ್ವಾಗತಿಸಲಾಯಿತು. ಗ್ರಾಮ ಪಂಚಾಯತಿ ಅಧ್ಯಕ್ಷ ಸಲಾಂ ಬಿಲಾಲ್ ವಿದ್ಯಾರ್ಥಿಗಳ ಜೊತೆ ಮೆರವಣಿಗೆಯಲ್ಲಿ ಸಹಕರಿಸಿದರು.

ಬಳಿಕ ಸಭಾ ಕಾರ್ಯವನ್ನು ಪುಟಾಣಿಗಳಿಂದ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಲಾಯಿತು. ಎಸ್.ಡಿ.ಎಂ.ಸಿ ಅಧ್ಯಕ್ಷ ಶಿವಪ್ರಸಾದ್ ಬೀದಿಮಜಲು, ಸದಸ್ಯ ಜನಾರ್ದನ ಗಡಿಕಲ್ಲು, ಮುಖ್ಯ ಗುರುಗಳಾದ ಜೆಸ್ಸಿ ಕೆ.ಎ., ಹಿರಿಯ ಹಾಗೂ ದೈಹಿಕ ಶಿಕ್ಷಣ ಶಿಕ್ಷಕಿ ಲೀಲಾವತಿ. ಎಂ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮುಖ್ಯಗುರುಗಳು ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಶೈಕ್ಷಣಿಕ ವಿಷಯಗಳ ಕುರಿತು ಮಾಹಿತಿ ನೀಡಿದರು. ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ಹಾಗೂ ಪಠ್ಯ ಪುಸ್ತಕ ವಿತರಣೆ ಮಾಡಲಾಯಿತು. ಸಹಶಿಕ್ಷಕಿ ಶ್ರೀಮತಿ ಕಮಲಾಕ್ಷಿ.ಕೆ ನಿರೂಪಿಸಿದರು. ಸಹಶಿಕ್ಷಕಿ ಸಜಿನ.ಕೆ ಸ್ವಾಗತಿಸಿದರು. ಸಹಶಿಕ್ಷಕಿ ಮಮತ ಸಿ.ಹೆಚ್. ವಂದಿಸಿದರು. ವಿದ್ಯಾರ್ಥಿನಿಯರಾದ ಮೆಲಿಷ, ಆರುಷಿ, ಕೀರ್ತನ, ಕನಿಷ್ಕ, ಐಶ್ವರ್ಯ, ರಿಷಿಕ ಪ್ರಾರ್ಥಿಸಿದರು. ಸಭೆಯಲ್ಲಿ ಎಸ್.ಡಿ.ಎಂ.ಸಿ‌. ಸದಸ್ಯರು, ಪೋಷಕರು, ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಸಿಹಿ ಊಟದ ವ್ಯವಸ್ಥೆ ಮಾಡಲಾಯಿತು.

Leave a Reply

error: Content is protected !!