ಕೇರಳದಲ್ಲಿ ಈಗಾಗಲೇ ಮುಂಗಾರು ಮಳೆ ಪ್ರಾರಂಭಗೊಂಡ ಹಿನ್ನೆಲೆ ನಾಳೆಯಿಂದ (ಭಾನುವಾರ) ಕರ್ನಾಟಕದಲ್ಲೂ ಮಳೆಯ ಅಲರ್ಟ್ ನೀಡಲಾಗಿದೆ.
ನಾಳೆ ರಾಜ್ಯಕ್ಕೆ ಮುಂಗಾರು ಪ್ರವೇಶಿಸಲಿದೆ. ಈ ಹಿನ್ನೆಲೆ ನಾಳೆಯಿಂದ ರಾಜ್ಯದ ಎಂಟು ಜಿಲ್ಲೆಗಳಲ್ಲಿ ಭಾರೀ ಮಳೆಯ ನಿರೀಕ್ಷೆ ಇದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಶಿವಮೊಗ್ಗ, ತುಮಕೂರು, ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ನಾಳೆಯಿಂದ ಐದು ದಿನಗಳ ಕಾಲ ಭಾರೀ ಪ್ರಮಾಣದಲ್ಲಿ ಬಿರುಗಾಳಿ ಸಹಿತ ಮಳೆಯ ಎಚ್ಚರಿಕೆ ನೀಡಿದ್ದು, ಮುಂಗಾರು ಪ್ರವೇಶದಿಂದ ಕ್ರಮೇಣ ಧಗೆಯ ತಾಪಮಾನ ಇಳಿಕೆಯಾಗುವ ಸಂಭವವಿದೆ