ನೆಲ್ಯಾಡಿ: ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ಆಶ್ರಯದಲ್ಲಿ ಬಿಲ್ಲವ ಗ್ರಾಮ ಸಮಿತಿ ನೆಲ್ಯಾಡಿ ಹಾಗೂ ಬಿಲ್ಲವ ಮಹಿಳಾ ವೇದಿಕೆ ನೆಲ್ಯಾಡಿ ಇದರ ವಾರ್ಷಿಕ ಮಹಾಸಭೆ ಮತ್ತು ಉಚಿತ ಪುಸ್ತಕ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಜೂ.2ರಂದು ನೆಲ್ಯಾಡಿ ಹೋಟೆಲ್ ಬಿರ್ವ ಸಭಾಂಗಣದಲ್ಲಿ ನಡೆಯಿತು.
ಪುತ್ತೂರು ತಾಲೂಕು ಬಿಲ್ಲವ ಸಂಘದ ಅಧ್ಯಕ್ಷರಾದ ಸತೀಶ್ ಕುಮಾರ್ ಕೆಡೆಂಜಿ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಅವರ ತತ್ವ ಸಿದ್ಧಾಂತದಂತೆ “ವಿದ್ಯೆಯಿಂದ ಸ್ವತಂತ್ರರಾಗಿ, ಸಂಘಟನೆಯಿಂದ ಬಲಿಷ್ಠರಾಗಿ” ಎಂಬಂತೆ ನಾವುಗಳು ಮುಂದುವರಿಯಬೇಕು ಹಾಗೂ ಸಂಘಟನೆಯನ್ನು ಮುಖ್ಯ ವಾಹಿನಿಗೆ ತರುವಂತಹ ಕೆಲಸ ಮಾಡಬೇಕು ಎಂದರು.
ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಮೋಹನ್ ಕುಮಾರ್ ದೋಂತಿಲ ವಹಿಸಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.
ವೇದಿಕೆಯಲ್ಲಿ ಪುತ್ತೂರು ತಾಲೂಕು ಬಿಲ್ಲವ ಸಂಘದ ಉಪಾಧ್ಯಕ್ಷೆ ವಿಮಲಾ ಸುರೇಶ್, ಬಂಟ್ವಾಳ ಪಿ ಆರ್ ಇ ಡಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಾರನಾಥ ಸಾಲ್ಯಾನ್, ಪುತ್ತೂರು ಬಿಲ್ಲವ ಸಂಘದ ವಲಯ ಸಂಚಾಲಕರಾದ ಸದಾನಂದ ಕುಂದರ್, ಪುತ್ತೂರು ಬಿಲ್ಲವ ಸಂಘದ ವಲಯ ಸಂಚಾಲಕರಾದ ಉಷಾ ಅಂಚನ್, ನೆಲ್ಯಾಡಿ ಬಿಲ್ಲವ ಮಹಿಳಾ ವೇದಿಕೆ ಅಧ್ಯಕ್ಷೆ ದೀಕ್ಷಾ ಸಾಲ್ಯಾನ್, ಕಾರ್ಯದರ್ಶಿ ಜನಾರ್ಧನ ಬಾಣಜಾಲು, ಕೋಶಾಧಿಕಾರಿ ಲೋಕೇಶ್ ಬಾಣಜಾಲು ಉಪಸ್ಥಿತರಿದ್ದರು.
ಸನ್ಮಾನ:
ಕೌಕ್ರಾಡಿ ಗ್ರಾಮ ಪಂಚಾಯಿತಿನ ಅಧ್ಯಕ್ಷ, ನೆಲ್ಯಾಡಿ ಬಿಲ್ಲವ ಗ್ರಾಮ ಸಮಿತಿಯ ಕೋಶಾಧಿಕಾರಿ ಲೋಕೇಶ್ ಬಾಣಜಾಲ್ ಹಾಗೂ ಬಂಟ್ವಾಳ ಪಿ ಆರ್ ಇ ಡಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಾರನಾಥ ಸಾಲ್ಯಾನ್ ಇವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದ ಆರಂಭದಲ್ಲಿ ನೋಣಯ್ಯ ಪೂಜಾರಿ ಅಂಬರ್ಜೆ ಮತ್ತು ಬಳಗದವರಿಂದ ಭಜನೆ, ಗುರುಪೂಜೆ ಕಾರ್ಯಕ್ರಮ ನಡೆಯಿತು. ಕಾರ್ಯದರ್ಶಿ ಜನಾರ್ಧನ ಬಾಣಜಾಲು ಗತಕಾಲದ ವರದಿ ವಾಚಿಸಿದರು. ಬಿಲ್ಲವ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಪುಸ್ತಕ ವಿತರಣೆ ಮಾಡಲಾಯಿತು.
ಕೋಶಾಧಿಕಾರಿ ಲೋಕೇಶ್ ಬಾಣಜಾಲು ವಂದಿಸಿದರು.