ಕುಕ್ಕೆ ಮಹಾವಿದ್ಯಾಲಯದ ಪದನಿಮಿತ್ತ ಕಾರ್ಯದರ್ಶಿ ಡಾ.ನಿಂಗಯ್ಯ ಅವರಿಗೆ ಸನ್ಮಾನ

ಶೇರ್ ಮಾಡಿ

ಕುಕ್ಕೆ ಶ್ರೀ ಸುಬ್ರಮಣ್ಯೇಶ್ವರ ಮಹಾವಿದ್ಯಾಲಯದ ಪದನಿಮಿತ್ತ ಕಾರ್ಯದರ್ಶಿ ಡಾ.ನಿಂಗಯ್ಯ ಅವರಿಗೆ ಮಹಾವಿದ್ಯಾಲಯ, ಪ್ರಾಕ್ತನ ವಿದ್ಯಾರ್ಥಿ ಸಂಘ ಹಾಗೂ ರಕ್ಷಕ ಶಿಕ್ಷಕ ಸಂಘದ ವತಿಯಿಂದ ಸನ್ಮಾನ ಕಾರ್ಯಕ್ರಮವು ನೆರವೇರಿತು.

ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ದಿನೇಶ ಪಿ.ಟಿ. ಸ್ವಾಗತಿಸಿ ಪ್ರಸ್ತಾವಿಕ ಮಾತುಗಳನ್ನು ನುಡಿದರು. ರಕ್ಷಕ ಶಿಕ್ಷಕ ಸಂಘದ ವತಿಯಿಂದ ಶಿವರಾಮ ರೈ, ಪ್ರಾಕ್ತನ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಣೇಶ್ ಪ್ರಸಾದ್, ಕನ್ನಡ ವಿಭಾಗದ ಮುಖ್ಯಸ್ಥ ಉದಯಕುಮಾರ್, ವಿದ್ಯಾರ್ಥಿಗಳ ಪರವಾಗಿ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುಹಾಸ್.ಎಮ್ ಜೆ. ಶುಭ ಹಾರೈಸಿದರು. ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಮನೋಹರ ಸನ್ಮಾನ ಪತ್ರ ವಾಚಿಸಿದರು.

ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಏಸುರಾಜ್ ಅವರು ವಹಿಸಿದ್ದರು. ಮಹಾವಿದ್ಯಾಲಯದ ಐಕ್ಯೂ ಎಸಿ ಸಂಯೋಜಕ ಲತಾ ಬಿ.ಟಿ., ವಾಣಿಜ್ಯಶಾಸ್ತ್ರ ವಿಭಾಗದ ಉಪನ್ಯಾಸಕಿಪುಷ್ಪ ಡಿ. ನಿರೂಪಿಸಿದರು.

Leave a Reply

error: Content is protected !!