ಉದ್ಯೋಗಾಕಾಂಕ್ಷಿಗಳೇ ಗಮನಿಸಿ.. 35 ಸಾವಿರ ಅತಿಥಿ ಶಿಕ್ಷಕರ ನೇಮಕಾತಿ..! ಗೆಸ್ಟ್‌ ಟೀಚರ್‌ʼಗೆ ವೇತನ ಎಷ್ಟು.?

ಶೇರ್ ಮಾಡಿ

ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯಲ್ಲಿ 2024-25ನೇ ಶೈಕ್ಷಣಿಕ ಸಾಲಿಗೆ ಒಟ್ಟು 35,000 ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ. ಈ ಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಖಾಯಂ ಶಿಕ್ಷಕರ ನೇಮಕವಾಗುವವರೆಗೆ ಅಥವಾ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಯಾವುದು ಮೊದಲೋ ಅಲ್ಲಿಯವರೆಗೆ ಶಿಕ್ಷಕರ ಕೊರತೆಯನ್ನು ನೀಗಿಸುವ ದೃಷ್ಟಿಯಿಂದ ಈ ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿ ನೀಡಿದೆ.

ಪ್ರಸ್ತುತ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ (ಪಿಎಸ್‌ಟಿ ಮತ್ತು ಜಿಪಿಟಿ) ಒಟ್ಟು -33,863 ಹುದ್ದೆಗಳಿಗೆ ಎದುರಾಗಿ ಮೊದಲ ಹಂತದಲ್ಲಿ ಸದರಿ ಹುದ್ದೆಗಳಿಗೆ ಜಿಲ್ಲಾವಾರು/ ತಾಲ್ಲೂಕುವಾರು ಅಥಿತಿ ಶಿಕ್ಷಕರ ಸಂಖ್ಯೆಯನ್ನು ನಿಗದಿಪಡಿಸಿ ಸುತ್ತೋಲೆ ಬಿಡುಗಡೆ ಮಾಡಿದೆ. ಈ ಹುದ್ದೆಗಳನ್ನು ಸರ್ಕಾರಿ ನಿಯಮಗಳ ಪ್ರಕಾರ ನೇರ ನೇಮಕಾತಿ ವರೆಗೆ ಅಥವಾ 2024-25ನೇ ಶೈಕ್ಷಣಿಕ ಸಾಲಿನ ಶಿಕ್ಷಣ ಚಟುವಟಿಕೆಗಳು ಮುಗಿಯುವವರೆಗೆ ನಿಯೋಜಿಸಿಕೊಳ್ಳಲಾಗುತ್ತದೆ.

ಷರತ್ತುಗಳು
ಮಂಜೂರಾದ ಖಾಲಿ ಇರುವ ಹುದ್ದೆಗಳಿಗೆ ಎದುರಾಗಿ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳುವುದು.
ಪ್ರಾಥಮಿಕ ಶಾಲೆಗಳಿಗೆ ಸಂಬಂಧಿಸಿದಂತೆ ಅತಿಥಿ ಶಿಕ್ಷಕರ ಆಯ್ಕೆ ಜವಾಬ್ದಾರಿ ಸಂಬಂಧಪಟ್ಟ ಸರ್ಕಾರಿ ಶಾಲಾ ಮುಖ್ಯ ಶಿಕ್ಷಕರುಗಳ ಮೂಲಕವೇ ಮಾಡುವುದು.
ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರನ್ನು ಪ್ರಮುಖವಾಗಿ ಆದ್ಯತೆ ಮೇರೆಗೆ ಗ್ರಾಮೀಣ ಪ್ರದೇಶಗಳಲ್ಲಿನ ಖಾಲಿ ಹುದ್ದೆಗಳಿಗೆ ಹಾಗೂ
ಶಿಕ್ಷಕ ರಹಿತ ಶಾಲೆಗಳಿಗೆ / ಹೆಚ್ಚು ವಿದ್ಯಾರ್ಥಿಗಳಿರುವ ಖಾಲಿ ಹುದ್ದೆಗಳಿಗೆ ಮೊದಲ ಆದ್ಯತೆ ನೀಡುವುದು.
ಅತಿಥಿ ಶಿಕ್ಷಕರನ್ನು ಆಯಾ ಹುದ್ದೆಗೆ ನಿಗದಿಪಡಿಸಿರುವ ಕನಿಷ್ಠ ವಿದ್ಯಾರ್ಹತೆಯನ್ನು ಪರಿಗಣಿಸಿ ಮೆರಿಟ್‌ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರ ಗೌರವ ಸಂಭಾವನೆ ದರ ಮಾಹೆಯಾನ ರೂ.10,000.
ಪ್ರಾಥಮಿಕಶಾಲಾಅತಿಥಿಶಿಕ್ಷಕರಹುದ್ದೆಗೆವಿದ್ಯಾರ್ಹತೆ

ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗೆ ಪದವಿ ಜತೆಗೆ ಡಿ.ಇಡಿ ಶಿಕ್ಷಣ, ಬಿ.ಇಡಿ ಶಿಕ್ಷಣ ಪಡೆದಿರಬೇಕು. ಹಾಗೂ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ಪಾಸಾಗಿರುವವರಿಗೆ ಮೊದಲ ಆಧ್ಯತೆಯನ್ನು ಆಯ್ಕೆ ಪ್ರಕ್ರಿಯೆಯಲ್ಲಿ ನೀಡಲಾಗುತ್ತದೆ.

ಶೀಘ್ರದಲ್ಲೇ ಈ ಹುದ್ದೆಗಳಿಗೆ ಅರ್ಜಿ ಕರೆಯಲಾಗುತ್ತದೆ. ಈ ಸಂದರ್ಭದಲ್ಲಿ ಅರ್ಜಿ ಹಾಕಿ, ನಿಗದಿತ ದಿನಾಂಕದಂದು ಆಯಾ ಶಾಲೆಯ ಮುಖ್ಯ ಶಿಕ್ಷಕರ ಎದುರಿಗೆ ಸಂದರ್ಶನಕ್ಕೆ ಮೂಲ ದಾಖಲೆಗಳೊಂದಿಗೆ ಹಾಜರಾಗಬೇಕು.

Leave a Reply

error: Content is protected !!