ಕಾರು ಹಾಗೂ ಬೈಕ್ ನಡುವೆ ಢಿಕ್ಕಿ – ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

ಶೇರ್ ಮಾಡಿ

ನೆಲ್ಯಾಡಿ:ಬೈಕ್ ಹಾಗೂ ಕಾರು ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆ ಸಮೀಪ ರೆಖ್ಯ ಗ್ರಾಮದ ನೇಲ್ಯಡ್ಕ ಎಂಬಲ್ಲಿ ಜೂ.5ರಂದು ರಾತ್ರಿ ನಡೆದಿದೆ.

ಮೃತಪಟ್ಟವರನ್ನು ಬೆಳ್ತಂಗಡಿ ತಾಲೂಕು ರೆಖ್ಯ ಗ್ರಾಮದ ನಳಾಲು ನಿವಾಸಿ ರವೀಂದ್ರ(48ವ.)ಎಂದು ಗುರುತಿಸಲಾಗಿದೆ. ಇವರು ಬೈಕ್‌ನಲ್ಲಿ ಎಂಜಿರದಿಂದ ರಾಷ್ಟ್ರೀಯ ಹೆದ್ದಾರಿ ಮೂಲಕ ಮನೆ ಕಡೆಗೆ ಬರುತ್ತಿದ್ದ ವೇಳೆ ಬೆಂಗಳೂರಿನಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಕಾರು ನಡುವೆ ಡಿಕ್ಕಿ ಸಂಭವಿಸಿ ಈ ಅಪಘಾತ ನಡೆದಿದೆ. ಘಟನೆಯಲ್ಲಿ ಬೈಕ್ ಸವಾರ ರವೀಂದ್ರ ಅವರು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಮೇಲ್ಸೇತುವೆಯಲ್ಲೇ ಅಪಘಾತ:
ರೆಖ್ಯ ಗ್ರಾಮದ ನೇಲ್ಯಡ್ಕದಲ್ಲಿ ರಾಷ್ಟ್ರೀಯ ಹೆದ್ದಾರಿಯ 1 ಬದಿ ಸರಕಾರಿ ಪ್ರೌಢಶಾಲೆ, ಇನ್ನೊಂದು ಬದಿ ಪ್ರಾಥಮಿಕ ಶಾಲೆಯಿದೆ. ರಸ್ತೆಯ ಎರಡು ಬದಿಯೂ ಅಂಗಡಿ, ಮನೆಗಳಿವೆ. ಈ ಹಿನ್ನೆಲೆಯಲ್ಲಿ ಇಲ್ಲಿ ಮೇಲ್ಸೇತುವೆ ರಚನೆಯಾಗಿದೆ. ಕಾಮಗಾರಿ ಸಂಪೂರ್ಣವಾಗಿಲ್ಲ. ಆದರೂ ಮೂರ್‍ನಾಲ್ಕು ವಾರಗಳ ಹಿಂದೆ ಮೇಲ್ಸೇತುವೆಯ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಆದರೆ ಸಮರ್ಪಕವಾದ ಸೂಚನಾ ಫಲಕಗಳು ಇಲ್ಲದೇ ಇರುವುದು ಮತ್ತು ಫೈಓವರ್‌ನ ಮಧ್ಯದಲ್ಲಿ ಇನ್ನೂ ಕಾಮಗಾರಿಗಳು ಅಲ್ಲಲ್ಲಿ ಬಾಕಿ ಇರುವುದರಿಂದ ಬೈಕ್‌ ಸವಾರರಿಗೆ ಸಂಚರಿಸಲು ಕಷ್ಟವಾಗುತ್ತಿದೆ. ಇದೀಗ ಈ ಮೇಲ್ಸೇತುವೆಯಲ್ಲೇ ಕಾರು ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ.

ಕೆಲದಿನಗಳ ಹಿಂದಷ್ಟೇ ಕಳಪೆ ಕಾಮಗಾರಿಯಿಂದಾಗಿ ಎಂಜಿರ ಸಮೀಪದ ಪರಕ್ಕಳದಲ್ಲಿ ನಿರ್ಮಾಣ ಹಂತದಲ್ಲಿದ್ದ ಸೇತುವೆ ಮುರಿದು ಬಿದ್ದಿತ್ತು.ಈ ಬಗ್ಗೆ ಸಾರ್ವಜನಿಕರು ಆಕೋಶ ವ್ಯಕ್ತಪಡಿಸಿದ್ದರು.

ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣೆ ಪೊಲೀಸರು ಹಾಗೂ ಬೆಳ್ತಂಗಡಿ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಮೃತರು ಪತ್ನಿ, ಎರಡು ಗಂಡು, ಒಂದು ಹೆಣ್ಣು ಮಕ್ಕಳು ಇದ್ದಾರೆ.

Leave a Reply

error: Content is protected !!