ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ನರೇಂದ್ರ ಮೋದಿ

ಶೇರ್ ಮಾಡಿ

ನರೇಂದ್ರ ಮೋದಿ ಅವರು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು. ಇದೇ ವೇಳೆ ರಾಷ್ಟ್ರಪತಿಗಳು ಎನ್‌ಡಿಎ ನಾಯಕ ಪ್ರಧಾನಿ ಮೋದಿಯವರನ್ನು ಸರ್ಕಾರ ರಚಿಸಲು ಆಹ್ವಾನಿಸಿದರು.

ನರೇಂದ್ರ ಮೋದಿ ಅವರು ಭಾನುವಾರ (ಜೂನ್ 9) ಸಂಜೆ 6 ಗಂಟೆಗೆ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಎನ್‌ಡಿಎಗೆ ಮೂರನೇ ಬಾರಿಗೆ ದೇಶ ಸೇವೆ ಮಾಡುವ ಅವಕಾಶವನ್ನು ನೀಡಿದ್ದಕ್ಕಾಗಿ ಪ್ರಧಾನಿ ಮೋದಿ ಜನರಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಎನ್‌ಡಿಎಗೆ ಮೂರನೇ ಬಾರಿಗೆ ಜನರ ಸೇವೆ ಮಾಡುವ ಅವಕಾಶ ಸಿಕ್ಕಿದೆ. ನಮಗೆ ಅವಕಾಶ ನೀಡಿದ ಜನರಿಗೆ ನಾನು ಧನ್ಯವಾದ ಹೇಳುತ್ತೇನೆ. ಮೊದಲಿನಂತೆಯೇ ಅಭಿವೃದ್ಧಿ ಕಾರ್ಯಗಳು ಮುಂದುವರಿಯುತ್ತವೆ ಎಂದು ನಾನು ದೇಶವಾಸಿಗಳಿಗೆ ಭರವಸೆ ನೀಡಲು ಬಯಸುತ್ತೇನೆ. 25 ಕೋಟಿ ಜನರನ್ನು ಬಡತನದಿಂದ ಹೊರತರಲಾಗಿದೆ. ಇದು ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆಯ ವಿಷಯವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟವು 292 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ಎನ್‌ಡಿಎ ಸಭೆಯಲ್ಲಿ ನರೇಂದ್ರ ಮೋದಿ ಅವರು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ. ಜೂನ್‌ 9ರಂದು ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

Leave a Reply

error: Content is protected !!