ಕೆಟ್ಟು ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಢಿಕ್ಕಿ ; ಚಾಲಕ ಗಂಭೀರ

ಶೇರ್ ಮಾಡಿ

ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ ಬಂದ ಲಾರಿ ಢಿಕ್ಕಿ ಹೊಡೆದು ಚಾಲಕ ಗಂಭೀರ ಗಾಯಗೊಂಡ ಘಟನೆ ಉದ್ಯಾವರದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ.

ಉದ್ಯಾವರ ಆಟೋ ಗ್ಯಾಸ್‌ ಸೆಂಟರ್‌ ಬಳಿ ಶುಕ್ರವಾರ ಬೆಳಗ್ಗಿನಿಂದಲೇ ಲಾರಿಯೊಂದು ಕೆಟ್ಟು ನಿಂತಿದ್ದು, ರಾತ್ರಿ ಮಳೆ ಸಂದರ್ಭ ಅದೇ ದಿಕ್ಕಿನಿಂದ ಬಂದ ಲಾರಿ ಹಿಂದಿನಿಂದ ಢಿಕ್ಕಿ ಹೊಡೆದಿದೆ.

ಢಿಕ್ಕಿಯ ರಭಸಕ್ಕೆ ಲಾರಿ ಚಾಲಕ ರಘು ಶೇಖರಪ್ಪ ತಂಶಿ ತೀವ್ರ ಗಾಯಗೊಂಡಿದ್ದು ಸ್ಥಳೀಯರು ತುರ್ತು ಕಾರ್ಯಾಚರಣೆ ನಡೆಸಿ ಗಾಯಾಳು ಚಾಲಕನನ್ನು ಹೊರಗೆ ತೆಗೆದು ಉಡುಪಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಎರಡೂ ವಾಹನಗಳು ಸಂಪೂರ್ಣ ಜಖಂಗೊಂಡಿದ್ದು ಕೆಟ್ಟು ಹೋದ ಲಾರಿಗಳ‌ನ್ನು ಹೆದ್ದಾರಿ ಮಧ್ಯೆ ನಿಲ್ಲಿಸಿ ಹೋಗಿದ್ದರ ಪರಿಣಾಮ ಸಂಚಾರಕ್ಕೆ ಅಡೆತಡೆಯುಂಟಾಗಿದೆ. ಈ ಕಾರಣಕ್ಕಾಗಿ ಎರಡೂ ಲಾರಿಗಳ ವಿರುದ್ಧ ಕಾಪು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Leave a Reply

error: Content is protected !!