ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಜೆಪಿ ನಡ್ಡಾ ರಾಜೀನಾಮೆ! ಕಾರಣ ಹೀಗಿದೆ ನೋಡಿ

ಶೇರ್ ಮಾಡಿ

ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿಯವರು ಇಂದು ( ಭಾನುವಾರ) ಪ್ರಮಾಣ ವಚಣ ಸ್ವೀಕರಿಸಿಲಿದ್ದಾರೆ. ಈ ನಡುವೆ ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿರುವ ಜೆಪಿ ನಡ್ಡಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಜೆಪಿ ನಡ್ಡಾ ಅಧಿಕಾರಾವಧಿ ಇದೇ ಜೂನ್ ತಿಂಗಳಲ್ಲಿ ಮುಗಿಯುತ್ತಿತ್ತು ಎಂದು ಹೇಳಲಾಗುತ್ತಿದೆ. ಇದೀಗ ಜೆಪಿ ನಡ್ಡಾ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಮೂಲಗಳ ಪ್ರಕಾರ ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿರುವ ಜಗತ್ ಪ್ರಕಾಶ್ ನಡ್ಡಾ (ಜೆಪಿ ನಡ್ಡಾ) ಕೂಡ ನರೇಂದ್ರ ಮೋದಿ ಸರ್ಕಾರದಲ್ಲಿ ಸಚಿವರಾಗಿ ಇಂದು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.

ಕೆಲವೇ ಕ್ಷಣಗಳಲ್ಲಿ ಮೂರನೇ ಬಾರಿಗೆ ಪ್ರಧಾನಿಯಾಗಿ ಮೋದಿ ಪದಗ್ರಹಣ ಮಾಡಲಿದ್ದಾರೆ. ಇನ್ನು ಯಾರ್ಯಾರು ಸಚಿವರಾಗುತ್ತಾರೆ ಎನ್ನುವುದೇ ಕುತೂಹಲ. ಇದೀಗ ಬಂದ ಮಾಹಿತಿ ಪ್ರಕಾರ, 63 ಸಂಸದರು ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಇನ್ನು ಉತ್ತರ ಪ್ರದೇಶ, ಬಿಹಾರದಿಂದ ತಲಾ 8 ಸಂಸದರಿಗೆ ಮಂತ್ರಿಗಿರಿ ದೊರಕಿದೆ. ಮಹಾರಾಷ್ಟ್ರದಿಂದ 6 ಸಂಸದರಿಗೆ ಕೇಂದ್ರ ಸಚಿವ ಸ್ಥಾನ. ಗುಜರಾತ್​​ ಐವರು, ಆಂಧ್ರ ಪ್ರದೇಶದಲ್ಲಿ ಮೂವರಿಗೆ ಮಂತ್ರಿಗಿರಿ. ಪಶ್ಚಿಮ ಬಂಗಾಳ, ತೆಲಂಗಾಣದಲ್ಲಿ ತಲಾ ಇಬ್ಬರಿಗೆ ಸಚಿವ ಸ್ಥಾನ. ಕೇರಳದಲ್ಲಿ ಗೆದ್ದ ಓರ್ವ ಬಿಜೆಪಿ ಸಂಸದನಿಗೆ ಸಚಿವ ಸ್ಥಾನ ಒಲಿದಿದೆ. ಇನ್ನು ಕರ್ನಾಟಕ್ಕೆ ಐದು ಸಚಿವ ಸ್ಥಾನ ಸಿಕ್ಕಿವೆ.

Leave a Reply

error: Content is protected !!