ನೆಲ್ಯಾಡಿ: ಮಕ್ಕಳ ಕಲಿಕೆಗೆ ಉತ್ತೇಜನ ನೀಡುವ ಸಲುವಾಗಿ ಹಾಗೂ ಮಕ್ಕಳಲ್ಲಿ ಸೇವಾ ಮನೋಭಾವ ರೂಪಗೊಳ್ಳುವ ಉದ್ದೇಶದಿಂದಾಗಿ ದಿ.ನಾರಾಯಣ ಮಾಸ್ಟರ್ ಹಾಗೂ ಅಬ್ರಹಾಂ ಈಶೋ ಮಾಸ್ಟರ್ ಇವರ ಸ್ಮರಣಾರ್ಥ ಮೊಹಮ್ಮದ್ ರಫೀಕ್ ಪ್ರಿಯದರ್ಶಿನಿ ಇವರ ಮುಂದಾಳತ್ವದಲ್ಲಿ ಬಡ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ ಮಾಡಲಾಯಿತು ಎಂದು ಸಂತ ಜಾರ್ಜ್ ವಿದ್ಯಾ ಸಂಸ್ಥೆಯ ಸ್ಥಾಪಕ ಕಾರ್ಯದರ್ಶಿ ಅಬ್ರಹಾಂ ವರ್ಗೀಸ್ ಹೇಳಿದರು.
ಅವರು ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ನೋಕಿಪಡಿ ಕ್ರಿಕೆಟರ್ಸ್ ಅಬುಧಾಬಿ ಮತ್ತು ನೆಲ್ಯಾಡಿ, ಕಾಮಧೇನು ಮಹಿಳಾ ಸಹಕಾರ ಸಂಘ ನೆಲ್ಯಾಡಿ, ಸಿಟಿ ಫ್ರೆಂಡ್ಸ್ ನೆಲ್ಯಾಡಿ ಹಾಗೂ ಬೆಸ್ಟ್ ಫ್ರೆಂಡ್ಸ್ ವಾಟ್ಸಪ್ ಗ್ರೂಪ್ ಸೈಂಟ್ ಜಾರ್ಜ್ ನೆಲ್ಯಾಡಿ ಇದರ ಜಂಟಿ ಆಶ್ರಯದಲ್ಲಿ ನಡೆದ ಬಡ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ನೆಲ್ಯಾಡಿ ಕಾಮಧೇನು ಮಹಿಳಾ ಸಹಕಾರ ಸಂಘ ಅಧ್ಯಕ್ಷೆ ಉಷಾ ಅಂಚನ್ ವಹಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು, ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆಯ ಸಂಚಾಲಕರಾದ ಫಾ.ನೋಮಿಸ್.ಪಿ.ಕುರಿಯಕೊಸ್, ಸೈಂಟ್ ಚಾರ್ಜ್ ವಿದ್ಯಾ ಸಂಸ್ಥೆಯ ನಿವೃತ್ತ ಗುರುಗಳಾದ ವಿ.ಆರ್ ಹೆಗಡೆ, ಕಡಬ ತಾಲೂಕು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷರಾದ ವಿಮಲ್ ಕುಮಾರ್, ನೆಲ್ಯಾಡಿ ಗ್ರಾಮ ಪಂಚಾಯತಿನ ಅಧ್ಯಕ್ಷರಾದ ಸಲಾಂ ಬಿಲಾಲ್, ವರ್ತಕ ಸಂಘದ ಅಧ್ಯಕ್ಷರಾದ ಸತೀಶ್ ಕೆ.ಎಸ್. ದುರ್ಗಾ ಶ್ರೀ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸುಮಾರು 150 ಬಡ ವಿದ್ಯಾರ್ಥಿಗಳಿಗೆ ಪುಸ್ತಕವನ್ನು ವಿತರಿಸಲಾಯಿತು. ನೆಲ್ಯಾಡಿ ಗ್ರಾಮ ಪಂಚಾಯತಿನ ಸದಸ್ಯರಾದ ಅಬ್ದುಲ್ ಜಬ್ಬಾರ್, ವಾಲ್ಟರ್ , ಇಸ್ಮಾಯಿಲ್ ಸಹಕರಿಸಿದರು.
ನೋಟರಿ ವಕೀಲರಾದ ಇಸ್ಮಾಯಿಲ್.ಎನ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಕೆ.ಕೆ ಇಸ್ಮಾಯಿಲ್ ವಂದಿಸಿದರು.