ಬೆಳ್ಳಾರೆಯ ಎಪಿಎಂಸಿ ಸಂತೆ ಮಾರುಕಟ್ಟೆಯಲ್ಲಿ ಮಹಿಳೆಯೊಬ್ಬರ ಮೃತದೇಹ ಕೊಲೆ ಮಾಡಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಮೃತ ಮಹಿಳೆಯನ್ನು ಬೆಳ್ಳಾರೆ ಗ್ರಾಮದ ನಳಿನಿ ಪಾಟಾಜೆ ಎಂದು ಗುರುತಿಸಲಾಗಿದೆ.
ಮಹಿಳೆಯ ತಲೆಗೆ ಕೆಂಪುಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ತಲೆ ಒಡೆದು ರಕ್ತ ಹರಿದುಹೋಗಿದೆ.
ಸ್ಥಳದಲ್ಲಿ ಕೆಂಪು ಕಲ್ಲಿದ್ದು, ಅದನ್ನೇ ತಲೆಗೆ ಎತ್ತಿಹಾಕಿ ಕೊಲೆ ಮಾಡಲಾಗಿದೆ ಎಂದು ಹೇಳಲಾಗಿದೆ.
ಸ್ಥಳದಲ್ಲಿ ಬೆಳ್ಳಾರೆ ಎಸೈ ಸಂತೋಷ್ ಹಾಗೂ ಸಿಬಂದಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಸ್ಪಷ್ಟ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ನೆಲ್ಯಾಡಿ ಕಾಮಧೇನು ಮಹಿಳಾ ಸಹಕಾರ ಸಂಘ ಅಧ್ಯಕ್ಷೆ ಉಷಾ ಅಂಚನ್ ವಹಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು, ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆಯ ಸಂಚಾಲಕರಾದ ಫಾ.ನೋಮಿಸ್.ಪಿ.ಕುರಿಯಕೊಸ್, ಸೈಂಟ್ ಚಾರ್ಜ್ ವಿದ್ಯಾ ಸಂಸ್ಥೆಯ ನಿವೃತ್ತ ಗುರುಗಳಾದ ವಿ.ಆರ್ ಹೆಗಡೆ, ಕಡಬ ತಾಲೂಕು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷರಾದ ವಿಮಲ್ ಕುಮಾರ್, ನೆಲ್ಯಾಡಿ ಗ್ರಾಮ ಪಂಚಾಯತಿನ ಅಧ್ಯಕ್ಷರಾದ ಸಲಾಂ ಬಿಲಾಲ್, ವರ್ತಕ ಸಂಘದ ಅಧ್ಯಕ್ಷರಾದ ಸತೀಶ್ ಕೆ.ಎಸ್. ದುರ್ಗಾ ಶ್ರೀ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸುಮಾರು 150 ಬಡ ವಿದ್ಯಾರ್ಥಿಗಳಿಗೆ ಪುಸ್ತಕವನ್ನು ವಿತರಿಸಲಾಯಿತು. ನೆಲ್ಯಾಡಿ ಗ್ರಾಮ ಪಂಚಾಯತಿನ ಸದಸ್ಯರಾದ ಅಬ್ದುಲ್ ಜಬ್ಬಾರ್, ವಾಲ್ಟರ್ , ಇಸ್ಮಾಯಿಲ್ ಸಹಕರಿಸಿದರು.
ನೋಟರಿ ವಕೀಲರಾದ ಇಸ್ಮಾಯಿಲ್.ಎನ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಕೆ.ಕೆ ಇಸ್ಮಾಯಿಲ್ ವಂದಿಸಿದರು.