ವೇಣೂರು ಕರಿಮಣೇಲು ಗುತ್ತು ನಿವಾಸಿ, ಹಿರಿಯ ಪತ್ರಕರ್ತ ವಿನಯ್ ಕುಮಾರ್ ಸೇಮಿತ (71) ಹೃದಯಾಘಾತದಿಂದ ಜೂ.12 ರಂದು ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ.
ಅವರು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿ, ಉದಯವಾಣಿ, ವಿಜಯಕರ್ನಾಟಕ, ಕನ್ನಡಪ್ರಭ ಪತ್ರಿಕೆಯ ವೇಣೂರು ಭಾಗದ ವರದಿಗಾರರಾಗಿ ಅನೇಕ ವರ್ಷ ಸೇವೆ ಸಲ್ಲಿಸಿದ್ದರು. ಜತೆಗೆ ವೇಣೂರು ಗ್ರಾ.ಪಂ. ಮಾಜಿ ಸದಸ್ಯರಾಗಿ, ಧಾರ್ಮಿಕ ಕಾರ್ಯಕ್ರಮದಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡಿದ್ದರು.
ಈ ಬಾರಿ 2024 ವೇಣೂರು ಬಾಹುಬಲಿ ಮಹಾಮಸ್ತಕಾಭೀಷಕದ ಮಾಧ್ಯಮ ಸಮಿತಿ ಸಂಚಾಲಕರಾಗಿ, 2012 ರಲ್ಲೂ ಮಹಾಮಸ್ತಕಾಭೀಷಕ ಮಾಧ್ಯಮ ಸಮಿತಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.
ಅವರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.