Government Job: ಇಂಡಿಯನ್ ಕೋಸ್ಟ್​ ಗಾರ್ಡ್​​​ನಲ್ಲಿ 320 ಹುದ್ದೆಗಳಿಗೆ ಅರ್ಜಿ ಆಹ್ವಾನ

ಶೇರ್ ಮಾಡಿ

Indian Coast Guard Recruitment 2024: ಇಂಡಿಯನ್ ಕೋಸ್ಟ್​ ಗಾರ್ಡ್(Indian Coast Guard)​ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 320 ನಾವಿಕ್(ಜನರಲ್ ಡ್ಯೂಟಿ), ಯಾಂತ್ರಿಕ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಹಾಕಿ.

ಜುಲೈ 3, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಅಭ್ಯರ್ಥಿಗಳು ಆನ್​ಲೈನ್(Online)​ ಮೂಲಕ ಅರ್ಜಿ ಹಾಕಬೇಕು. ಕೋಸ್ಟ್​ ಗಾರ್ಡ್​​ನಲ್ಲಿ ಉದ್ಯೋಗ ಮಾಡಲು ಬಯಸುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಹುದ್ದೆಯ ಮಾಹಿತಿ:
ನಾವಿಕ್(ಜನರಲ್ ಡ್ಯೂಟಿ) -260
ಯಾಂತ್ರಿಕ್​ – 60

ವಿದ್ಯಾರ್ಹತೆ:
ನಾವಿಕ್(ಜನರಲ್ ಡ್ಯೂಟಿ) – 12ನೇ ತರಗತಿ
ಯಾಂತ್ರಿಕ್​ – 10ನೇ ತರಗತಿ, 12ನೇ ತರಗತಿ, ಡಿಪ್ಲೊಮಾ

ವೇತನ:
ನಾವಿಕ್(ಜನರಲ್ ಡ್ಯೂಟಿ) – ಮಾಸಿಕ ₹ 21,700
ಯಾಂತ್ರಿಕ್​ – ಮಾಸಿಕ ₹ 29,200

ವಯೋಮಿತಿ:
ಇಂಡಿಯನ್ ಕೋಸ್ಟ್​ ಗಾರ್ಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಗರಿಷ್ಠ 22 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳು- 3 ವರ್ಷ
SC/ST ಅಭ್ಯರ್ಥಿಗಳು- 5 ವರ್ಷ

ಅರ್ಜಿ ಶುಲ್ಕ:
SC/ST ಅಭ್ಯರ್ಥಿಗಳು: ಇಲ್ಲ
ಎಲ್ಲಾ ಇತರ ಅಭ್ಯರ್ಥಿಗಳು: ರೂ.300/-
ಪಾವತಿ ವಿಧಾನ: ಆನ್‌ಲೈನ್

ಆಯ್ಕೆ ಪ್ರಕ್ರಿಯೆ:
ಕಂಪ್ಯೂಟರ್ ಆಧಾರಿತ ಪರೀಕ್ಷೆ
ಮೌಲ್ಯಮಾಪನ ಮತ್ತು ಹೊಂದಾಣಿಕೆಯ ಪರೀಕ್ಷೆ
ದೈಹಿಕ ಸಾಮರ್ಥ್ಯ ಪರೀಕ್ಷೆ
ಡಾಕ್ಯುಮೆಂಟ್ ಪರಿಶೀಲನೆ
ವೈದ್ಯಕೀಯ ಪರೀಕ್ಷೆ

ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್​ನ್ನು ಈ ಕೆಳಗೆ ನೀಡಲಾಗಿದೆ.

ಆನ್​ಲೈನ್ ಮೂಲಕ ಅರ್ಜಿ ಹಾಕಲು
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 13/06/2024
ಅರ್ಜಿ ಸಲ್ಲಿಸಲು ಕೊನೆಯ ದಿನ: ಜುಲೈ 3, 2024

Leave a Reply

error: Content is protected !!