ಜೂ.30 ರಂದು ನಡೆಯಲಿರುವ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (TET) ಗೆ ಅರ್ಜಿ ಸಲ್ಲಿಸಿ, ನಿಗದಿತ ಶುಲ್ಕ ಪಾವತಿಸಿದ ಎಲ್ಲ ಅಭ್ಯರ್ಥಿಗಳ ಪ್ರವೇಶ ಪತ್ರವನ್ನು ಇಲಾಖೆ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ.
ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KARTET-2024) ದಿನಾಂಕ:30/06/2024ರ ಭಾನುವಾರದಂದು ರಾಜ್ಯಾದ್ಯಂತ ಎರಡು ಅಧಿವೇಶನಗಳಲ್ಲಿ (ಪ್ರತ್ರಿಕೆ-1 ಮೊದಲ ಅಧಿವೇಶನ ಮತ್ತು ಪತ್ರಿಕೆ-2 ಮಧ್ಯಾಹ್ನದ ಅಧಿವೇಶನ) ನಡೆಯಲಿದೆ ಅಂತ ತಿಳಿಸಿದೆ.
ಟಿಇಟಿ ಪರೀಕ್ಷೆಗೆ ಪ್ರವೇಶ ಪತ್ರ ಈ ರೀತಿ ಡೌನ್ ಲೋಡ್ ಮಾಡಿಕೊಳ್ಳಿ
ಈ ಪರೀಕ್ಷೆಗೆ ನಿಗದಿತ ಶುಲ್ಕ ಪಾವತಿಸಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ಎಲ್ಲಾ ಅಭ್ಯರ್ಥಿಗಳ ಪ್ರವೇಶ ಪತ್ರವನ್ನು ದಿನಾಂಕ:20/06/2024 ರಿಂದ ಇಲಾಖಾ ವೆಬ್‌ಸೈಟ್
https://schooleducation.karnataka.gov.in
ನಲ್ಲಿ ಲಭ್ಯವಿರಿಸಿದೆ. ಅಭ್ಯರ್ಥಿಗಳು ತಮ್ಮ User Id ಮತ್ತು Password ಅನ್ನು ನಮೂದಿಸಿ download ಮಾಡಿಕೊಳ್ಳಲು ತಿಳಿಸಿದೆ.
KARTET-2024ರ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ನೀಡಲಾದ ಸೂಚನೆಗಳನ್ನು ವೆಬ್ ಸೈಟಿನಲ್ಲಿ ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳು ಸೂಚನಾ ಪ್ರತಿಯನ್ನು ಡೌನ್‌ಲೋಡ್ ಮಾಡಿಕೊಂಡು, ಕೂಲಂಕಷವಾಗಿ ಓದಿ ಅರ್ಥೈಸಿಕೊಂಡು, ಅದರಂತೆ ಸಿದ್ಧತೆಯೊಂದಿಗೆ ಪರೀಕ್ಷೆಗೆ ಹಾಜರಾಗುವಂತೆ ತಿಳಿಸಿದೆ.
ಆಯಾ ಜಿಲ್ಲೆಯ ಉಪನಿರ್ದೇಶಕರು(ಆಡಳಿತ), ಶಾಲಾ ಶಿಕ್ಷಣ ಇಲಾಖೆ ಹಾಗೂ ಪರೀಕ್ಷಾ ನೋಡಲ್ ಅಧಿಕಾರಿಗಳ ದೂರವಾಣಿ ಸಂಖ್ಯೆಗಳನ್ನೊಳಗೊಂಡ ಪಟ್ಟಿಯನ್ನೂ ಸಹ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದ್ದು, ಪರೀಕ್ಷಾ ಕೇಂದ್ರಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಳ ಅಗತ್ಯವಿದ್ದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ.