ಅಯೋಧ್ಯೆಯ ರಾಮ ಮಂದಿರವನ್ನು ಸಾರ್ವಜನಿಕರಿಗೆ ತೆರೆದ ನಂತರ ಮೊದಲ ಭಾರಿ ಮಳೆಯಾಗಿದೆ. ಮಳೆಯಿಂದ ಗರ್ಭಗುಡಿಯ ಛಾವಣಿಯಿಂದ ನೀರು ಸೋರಿಕೆಯಾಗುತ್ತಿದೆ ಎಂದು ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಹೇಳಿದ್ದಾರೆ. ದೇವಾಲಯದ ನಿರ್ಮಾಣದಲ್ಲಿ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಆರೋಪಿಸಿದ ದಾಸ್, ಮಧ್ಯರಾತ್ರಿ ಮಳೆ ಬಿದ್ದಿದೆ.
ದೇವಾಲಯದ ಆವರಣದಿಂದ ಮಳೆನೀರು ಹರಿದು ಹೋಗಲು ಯಾವುದೇ ವ್ಯವಸ್ಥೆ ಇಲ್ಲ ಎಂದು ಆರೋಪಿಸಿದರು. ದೇವಾಲಯದ ಅಧಿಕಾರಿಗಳು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದರು.
ಕೂಡಲೇ ಎಚ್ಚೆತ್ತ ಅಧಿಕಾರಿಗಳು
ಮೇಲ್ಛಾವಣಿಯಿಂದ ನೀರು ಸೋರಿಕೆಯಾದ ಘಟನೆಯ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ., ದೇವಾಲಯದ ನಿರ್ಮಾಣ ಸಮಿತಿಯ ಅಧ್ಯಕ್ಷ ನೃಪೇಂದ್ರ ಮಿಶ್ರಾ ಅವರು ದೇವಾಲಯಕ್ಕೆ ಆಗಮಿಸಿ ಮೇಲ್ಛಾವಣಿಯನ್ನು ದುರಸ್ತಿ ಮಾಡಿಸಿದ್ದಾರೆ. ಜಲನಿರೋಧಕ ಮಾಡಲು ಸೂಚನೆ ನೀಡಿದ್ದಾರೆ ಎಂದು ದೇವಾಲಯದ ಟ್ರಸ್ಟ್ ಮೂಲಗಳು ತಿಳಿಸಿವೆ.
ಸುದ್ದಿ ಹಿಂದಿನ ಅಸಲಿ ಸತ್ಯ
ಈ ಸುದ್ದಿ ಕಾಡ್ಗಿಚ್ಚಿನಂತೆ ವೇಗವಾಗಿ ಹಬ್ಬಿದೆ. ಕೋಟಿ ಕೋಟಿ ವೆಚ್ಚ ಮಾಡಿ ಕಟ್ಟಿರುವ ಮಂದಿರ ಕಳಪೆ ಕಾಮಗಾರಿಯಿಂದ ಸೋರುತ್ತಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ಬಗ್ಗೆ ಸತ್ಯಾಸತ್ಯತೆಗಳನ್ನು ಪರಿಶೀಲಿಸಿದಾಗ, ಮಳೆ ನೀರು ಸೋರುತ್ತಿರುವುದು ನಿಜ. ಆದರೆ ಕಾಮಗಾರಿ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಈ ರೀತಿ ಆಗಿದೆ ಎಂದು ತಿಳಿದು ಬಂದಿದೆ. ಇದಕ್ಕೆ ಪೂರಕವಾಗಿ ಸಂಬಂಧ ಪಟ್ಟ ಅಧಿಕಾರಿಗಳು ಸ್ಪಷ್ಟನೆ ನೋಡಿದ್ದಾರೆ.