
ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪ ಈಚರ್ ಲಾರಿ, ಕರ್ನಾಟಕ ಸಾರಿಗೆ ಸಂಸ್ಥೆಗೆ ಸೇರಿದ ಐರಾವತ ಬಸ್, ರಾಜಹಂಸ ಬಸ್ ಗಳ ನಡುವೆ ಸರಣಿ ಅಪಘಾತ ಸಂಭವಿಸಿ ಬಸ್ ಚಾಲಕ ಸಣ್ಣಪುಟ್ಟ ಗಾಯಗೊಂಡ ಘಟನೆ ಶನಿವಾರ ಸಂಜೆ ನಡೆದಿದೆ.

ಕುಂದಾಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಐರಾವತ ಬಸ್ ಅನ್ನು ಮಂಗಳೂರಿನ ಬೆಂಗಳೂರಿಗೆ ಪಾರ್ಸೆಲ್ ಕೊಂಡೊಯ್ಯುವ ಈಚರ್ ಲಾರಿ ಓವರ್ ಟೇಕ್ ಮಾಡುವ ಬರದಲ್ಲಿ ಎದುರುಗಡೆಯಿಂದ ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ರಾಜಹಂಸ ಬಸ್ಸಿಗೆ ಡಿಕ್ಕಿ ಹೊಡೆದು ಹಳ್ಳಕ್ಕೆ ಬಿದ್ದು. ಈ ಸಂದರ್ಭದಲ್ಲಿ ರಾಜಹಂಸ ಬಸ್ ಹಾಗೂ ಐರಾವತ ಬಸ್ ಮುಖಾಮುಖಿ ಡಿಕ್ಕಿಯಾಯಿತು.
ಘಟನೆಯಲ್ಲಿ ಐರಾವತ ಬಸ್ ಚಾಲಕ ಕಿರಣ್ ಮೇಸ್ತ ಎಂಬವರು ಗಾಯಗೊಂಡರು. ಘಟನೆಯಿಂದಾಗಿ ಸ್ಥಳದಲ್ಲಿ ಕೆಲ ಹೊತ್ತು ಟ್ರಾಫಿಕ್ ದಟ್ಟಣೆ ಉಂಟಾಯಿತು. ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆಯ ಪೊಲೀಸರು ಹಾಗೂ ಪರಶುರಾಮ ಕ್ರೇನ್ ತಂಡದವರು ಸ್ಥಳಕ್ಕೆ ಭೇಟಿ ನೀಡಿ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಿದರು.









