ಮನೆಯಲ್ಲಿ ಮಲಗಿದ್ದ ವೃದ್ಧೆಯ ಕಿವಿಯಿಂದ ಚಿನ್ನಾಭರಣ ಕಳವು; ಪ್ರಕರಣ ದಾಖಲು

ಶೇರ್ ಮಾಡಿ

ವಿಟ್ಲ: ಮನೆಯಲ್ಲಿ ಮಲಗಿದ್ದ ವೇಳೆ ವೃದ್ಧೆಯೊಬ್ಬರ ಕಿವಿಯಿಂದ ಚಿನ್ನಾಭರಣ ಕಳವುಗೈದ ಘಟನೆ ವಿಟ್ಲ ಪಡ್ನೂರು ಗ್ರಾಮದಲ್ಲಿ ನಡೆದಿದೆ.

ವಿಟ್ಲ ಪಡ್ನೂರು ಗ್ರಾಮದ ಪಳ್ಳಿಗದ್ದೆ ನಿವಾಸಿ ಬಿ.ಎಂ ಇಬ್ರಾಹಿಂ ಅವರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ದೂರದಾರ ಇಬ್ರಾಹಿಂ ಅವರ ಸಹೋದರನ ಮನೆಯ ಹಿಂಬಾಗಿಲ ಕಿಟಕಿಯ ಸರಳನ್ನು ಕಳ್ಳರು ಮುರಿದು ಮನೆಯ ಒಳಗೆ ಪ್ರವೇಶಿಸಿ, ಕೋಣೆಯಲ್ಲಿ ತಾಯಿ ಐಸಮ್ಮರವರು ಧರಿಸಿದ್ದ ಅಂದಾಜು 8 ಗ್ರಾಂ ತೂಕದ ಚಿನ್ನದ ಆಭರಣಗಳನ್ನು ಕಳ್ಳತನ ಮಾಡಿರುತ್ತಾರೆ. ಕಳ್ಳತನವಾಗಿರುವ ಆಭರಣಗಳ ಅಂದಾಜು ಮೌಲ್ಯ ಸುಮಾರು 48 ಸಾವಿರ ರೂ. ಎಂದು ಅಂದಾಜಿಸಲಾಗಿದೆ.

ಮನೆಗೆ ನುಗ್ಗಿದ ಕಳ್ಳರು ಮಹಿಳೆಯ ಬಾಯಿಯನ್ನು ಮುಚ್ಚಿ, ಕಿವಿಯಿಂದ ಚಿನ್ನವನ್ನು ಕಿತ್ತು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಬಳಿಕ ವೃದ್ಧೆ ಪ್ರಜ್ಞೆ ತಪ್ಪಿ ಬಿದ್ದಿದ್ದರು ಎನ್ನಲಾಗಿದೆ. ಬೆಳಗ್ಗೆ ಈ ಘಟನೆ ಬೆಳಕಿಗೆ ಬಂದಿದೆ ಎಂದು ದೂರಲಾಗಿದೆ.

Leave a Reply

error: Content is protected !!