ಡ್ಯೂಟಿ ಹಾಕಲು ಕಿರಿಯ ಪೊಲೀಸರಿಂದ ಲಂಚ ಸ್ವೀಕರಿಸುತ್ತಿದ್ದ ಕೆ.ಎಸ್.ಆರ್.ಪಿ. ಇನ್ಸ್ ಪೆಕ್ಟರ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ಅಸೈಗೋಳಿ ಎಂಬಲ್ಲಿ ನಡೆದಿದೆ.
ಲಂಚ ಸ್ವೀಕರಿಸುತ್ತಿದ್ದ ಕೆ.ಎಸ್.ಆರ್.ಪಿ. ಇನ್ಸ್ ಪೆಕ್ಟರ್ ಮೊಹಮ್ಮದ್ ಆರೀಸ್ ಲೋಕಾಯುಕ್ತ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ಇನ್ಸ್ ಪೆಕ್ಟರ್ ಮೊಹಮ್ಮದ್ ಆರೀಸ್ ಕಿರಿಯ ಪೊಲೀಸರಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಟ್ರ್ಯಾಪ್ ಆಗಿದ್ದಾರೆ. ಗೆಸ್ಟ್ ಹೌಸ್ ಡ್ಯೂಟಿ ಹಾಕಲು ಲಂಚಕ್ಕೆ ಡಿಮಾಂಡ್ ಮಾಡಿದ್ದ ಆರೀಸ್, ಕೆ.ಎಸ್.ಆರ್.ಪಿ. ಸಿಬ್ಬಂದಿಗೆ ಗೆಸ್ಟ್ ಹೌಸ್ ಡ್ಯೂಟಿ ಹಾಕಲು ಪ್ರತಿ ತಿಂಗಳು 6 ಸಾವಿರ ರೂ. ಲಂಚ ನೀಡಲು ಡಿಮ್ಯಾಂಡ್ ಮಾಡಿದ್ದರು.
ಅದರಂತೆ ಇಂದು ಆರೀಸ್ 18 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಲೋಕಾಯುಕ್ತ ಎಸ್.ಪಿ. ನಟರಾಜ್, ಡಿವೈಎಸ್ಪಿ ಚೆಲುವರಾಜ್ ನೇತೃತ್ವದಲ್ಲಿ ದಾಳಿ ನಡೆದಿತ್ತು.