ಮಳೆಯ ಆರ್ಭಟ: ಆಗುಂಬೆ ಘಾಟ್‌ನಲ್ಲಿ ಗುಡ್ಡ ಕುಸಿತ

ಶೇರ್ ಮಾಡಿ

ಮಲೆನಾಡಿನಲ್ಲಿ ನೈಋತ್ಯ ಮುಂಗಾರು ಮಳೆ ಅಬ್ಬರಿಸುತ್ತಿದೆ. ಭಾರೀ ಮಳೆಯ ಪರಿಣಾಮ ಕರಾವಳಿ-ಮಲೆನಾಡು ಸಂಪರ್ಕಿಸುವ ಆಗುಂಬೆ ಘಾಟ್ ರಸ್ತೆಯಲ್ಲಿ ಗುಡ್ಡ ಕುಸಿತವಾಗಿದೆ.

ಭಾನುವಾರ ಬೆಳಗ್ಗೆ ಆಗುಂಬೆ ಘಾಟ್ ರಸ್ತೆಯಲ್ಲಿ ಗುಡ್ಡ ಕುಸಿತವಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಆಗುಂಬೆ ಘಾಟ್‌ ರಸ್ತೆಯ 4ನೇ ತಿರುವಿನಲ್ಲಿ ಗುಡ್ಡ ಕುಸಿತಗೊಂಡು ರಸ್ತೆ ಮೇಲೆ ಗುಡ್ಡದ ಮಣ್ಣು, ಮರ-ಗಿಡಗಳು ಬಿದ್ದಿದೆ. ಮಣ್ಣು ತೆರವುಗೊಳಿಸುವ ಕಾರ್ಯಾಚರಣೆ ಆರಂಭವಾಗಿದೆ. ಇದರಿಂದಾಗಿ ವಾಹನಗಳ ಸಂಚಾರ ತಡವಾಗುತ್ತಿದೆ.

ಗುಡ್ಡದ ಮಣ್ಣು ಇನ್ನಷ್ಟು ಕುಸಿದು ರಸ್ತೆಯ ಮೇಲೆ ಬಿದ್ದರೆ ಆಗುಂಬೆ ಘಾಟ್ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಳ್ಳುವ ಆತಂಕ ಎದುರಾಗಿದೆ. ಶಿವಮೊಗ್ಗ-ಉಡುಪಿ ಸಂಪರ್ಕಿಸುವ ಪ್ರಮುಖ ಹೆದ್ದಾರಿ ಆಗುಂಬೆ ಘಾಟ್ ಮೂಲಕ ಹಾದು ಹೋಗುತ್ತದೆ.

ಭಾರಿ ಮಳೆಯ ಕಾರಣ ಆಗಂಬೆ ಘಾಟ್‌ನಲ್ಲಿ ಗುಡ್ಡ ಕುಸಿತಗೊಂಡಿದೆ. ಇದರಿಂದಾಗಿ ಆತಂಕದಲ್ಲಿ ವಾಹನ ಚಾಲನೆ ಮಾಡಬೇಕಾಗಿದೆ. ಶಿವಮೊಗ್ಗ ಮತ್ತು ಮಂಗಳೂರು ನಡುವಿನ ಲಘು ವಾಹನಗಳು ಆಗುಂಬೆ ಮೂಲಕ ಸಾಗುತ್ತವೆ.

Leave a Reply

error: Content is protected !!