ಅಂಗನವಾಡಿ ಇನ್ನು “ಸರಕಾರಿ ಮೊಂಟೆಸರಿ”: ಸಚಿವೆ ಲಕ್ಷ್ಮೀ

ಶೇರ್ ಮಾಡಿ

ಅಂಗನವಾಡಿ ಎನ್ನುವುದು 50 ವರ್ಷ ಹಳೆಯ ಪರಿಕಲ್ಪನೆಯಾಗಿದ್ದು, ಬದಲಾದ ಸನ್ನಿವೇಶದಲ್ಲಿ ಅದರಲ್ಲೂ ಸುಧಾರಣೆ ಅಗತ್ಯವಿದೆ. ಹಾಗಾಗಿ ಅಂಗನವಾಡಿಗಳನ್ನು “ಸರಕಾರಿ ಮೊಂಟೆಸರಿ’ ಆಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಆರ್‌.ಹೆಬ್ಬಾಳ್ಕರ್‌ ಹೇಳಿದ್ದಾರೆ.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂಗನವಾಡಿಯನ್ನು ಮೊಂಟಸರಿಗಳಾಗಿಸುವ ಪ್ರಕ್ರಿಯೆ ಆರಂಭಿಸಲಾಗಿದೆ. ರಾಜ್ಯದಲ್ಲಿರುವ 70 ಸಾವಿರದಷ್ಟು ಅಂಗನವಾಡಿಗಳಲ್ಲಿ ಪ್ರಥಮ ಹಂತದಲ್ಲಿ 20 ಸಾವಿರ ಅಂಗನ ವಾಡಿಗಳನ್ನು ಮೊಂಟೆಸರಿ ಗಳಾಗಿ ಪರಿವರ್ತಿಸಲಾಗುವುದು ಎಂದರು.

ಮೊಂಟೆಸರಿ ಮಾಡಿದ ಮೇಲೆ ಶಿಕ್ಷಕರ ವಿದ್ಯಾರ್ಹತೆಯೂ ಚೆನ್ನಾಗಿರಬೇಕು. ಇಲಾಖೆಯಲ್ಲಿ 15 ಸಾವಿರ ಅಂಗನವಾಡಿ ಕಾರ್ಯಕರ್ತರು ಪದವಿ ಹಾಗೂ 2 ಸಾವಿರ ಮಂದಿ ಸ್ನಾತಕೋತ್ತರ ಪದವಿ ಹೊಂದಿದ್ದಾರೆ. ಅಂಥವರನ್ನು ಗುರುತಿಸಿ ಅವರಿಗೆ ತರಬೇತಿ ನೀಡಲಾಗುವುದು. ಕೇಂದ್ರ ಹಾಗೂ ರಾಜ್ಯ ಸರಕಾರದ ಸಹಯೋಗದಲ್ಲಿ ಜಂಟಿಯಾಗಿ ಸ್ಮಾರ್ಟ್‌ ತರಗತಿಗಳನ್ನು ನಡೆಸಲಾಗುತ್ತಿದ್ದು, ಇದಕ್ಕೆ ಕೇಂದ್ರದ ಮಹಿಳಾ ಕಲ್ಯಾಣ ಅಭಿವೃದ್ಧಿ ಸಚಿವರು ಬೆಂಬಲ ನೀಡಿದ್ದಾರೆ. ಇಲಾಖೆಯ ಅಧಿಕಾರಿಗಳೂ ಒಪ್ಪಿಗೆ ಕೊಟ್ಟಿದ್ದಾರೆ. ಕನ್ನಡ ಮತ್ತು ಆಂಗ್ಲ ಭಾಷೆಯಲ್ಲೂ ಕಲಿಯುವ ಅವಕಾಶ ಇರಲಿದೆ ಎಂದು ವಿವರಿಸಿದರು.

Leave a Reply

error: Content is protected !!