ಗ್ಯಾಸ್ ಟ್ಯಾಂಕರಿಗೆ ಕಾರು ಡಿಕ್ಕಿ: ಒಬ್ಬನಿಗೆ ತೀವ್ರ ಗಾಯ

ಶೇರ್ ಮಾಡಿ

ನೆಲ್ಯಾಡಿ: ಗ್ಯಾಸ್ ಟ್ಯಾಂಕರಿಗೆ ಕಾರು ಡಿಕ್ಕಿಯಾಗಿ ಒಬ್ಬ ಗಂಭೀರ ಗಾಯಗೊಂಡ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಗುಂಡ್ಯ ಸಮೀಪದ ಬರ್ಚಿನಹಳ್ಳಿ ಎಂಬಲ್ಲಿ ಬುಧವಾರ ಬೆಳಗ್ಗೆ ನಡೆದಿದೆ.

ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಇಂಡಿಯನ್ ಗ್ಯಾಸ್ ಟ್ಯಾಂಕರಿಗೆ ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಸುಂದರ್, ಸುಹೇಲ್ ಪಾಷಾ, ಮೇಲುಮನಿ, ಪುಷ್ಪರಾಜ್ ಎಂಬುವರು ಪ್ರಯಾಣಿಸುತ್ತಿದ್ದು. ಈ ಪೈಕಿ ಪುಷ್ಪರಾಜ್ ಎಂಬುವರು ತೀವ್ರ ಗಾಯಗೊಂಡು ಅವರಿಗೆ ನೆಲ್ಯಾಡಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ನೀಡಿ ಬಳಿಕ ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.

Leave a Reply

error: Content is protected !!