ಕರಾವಳಿ ಜಿಲ್ಲೆಗಳಲ್ಲಿ ಜು.25ರವರೆಗೂ ವ್ಯಾಪಕ ಮಳೆ; ಹಳದಿ ಅಲರ್ಟ್‌ ಘೋಷಿಸಲಾಗಿದೆ

ಶೇರ್ ಮಾಡಿ

ಕರ್ನಾಟಕದ ಬಹುತೇಕ ಕಡೆಗಳಲ್ಲಿ ಮುಂದಿನ 5 ದಿನಗಳವರೆಗೆ ಮಳೆಯ ಪ್ರಮಾಣ ತಗ್ಗಲಿದೆ. ಆದರೆ, ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು ಜುಲೈ 23ರವರೆಗೆ ಹಳದಿ ಅಲರ್ಟ್‌ ಘೋಷಿಸಲಾಗಿದೆ.

ಕರ್ನಾಟಕ ರಾಜ್ಯಾದ್ಯಂತ ಮುಂದಿನ 5 ದಿನಗಳವರೆಗೆ ಮಳೆಯ ತೀವ್ರತೆ ಕಡಿಮೆಯಾಗುವ ಹೆಚ್ಚಿನ ಸಾಧ್ಯತೆಗಳಿವೆ. ಆದರೆ, ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಜು.25ರ ವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಗಳಿವೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಜುಲೈ 23ರ ವರೆಗೆ ಹಳದಿ ಅಲರ್ಟ್‌ ಘೋಷಿಸಲಾಗಿದೆ.
ರಾಜ್ಯದಾದ್ಯಂತ ಜೋರಾದ ಗಾಳಿಯೊಂದಿಗೆ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣದಿಂದ ಭಾರಿ ಮಳೆ ಹಾಗೂ ಅಲ್ಲಲ್ಲಿ ಅತಿ ಭಾರಿ ಮಳೆ. ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮತ್ತು ಅತಿ ಭಾರಿ ಮಳೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಭಾರೀ ಮಳೆ ಮತ್ತು ನಿರಂತರ ಗಾಳಿಯ ವೇಗ 30-40 ಕಿಮೀ ತಲುಪುವ ಸಾಧ್ಯತೆಯಿದೆ.

Leave a Reply

error: Content is protected !!