ಮುಂಡಾಜೆ ಪದವಿಪೂರ್ವ ಕಾಲೇಜು ಮುಂಡಾಜೆ ಇಲ್ಲಿನ ಮಹಿಳಾ ಕೋಶ ಹಾಗೂ ಡಿಜಿಟಲ್ ಸಾಕ್ಷರತಾ ಕ್ಲಬ್ ನ ವತಿಯಿಂದ ನಡೆದ ಡಿಜಿಟಲ್ ಸಾಕ್ಷರತಾ ಕಾರ್ಯಗಾರ
ಸಂಪನ್ಮೂಲ ವ್ಯಕ್ತಿಗಳಾಗಿ ಕಾಲೇಜಿನ ಉಪನ್ಯಾಸಕ ಶ್ರೀ ಕೃಷ್ಣ ಕಿರಣ್.ಕೆ. ಡಿಜಿಟಲೀಕರಣ ವ್ಯವಸ್ಥೆಯ ಬಳಕೆ ಮತ್ತು ಸುರಕ್ಷತೆಯ ಬಗ್ಗೆ ಮಾಹಿತಿಯನ್ನು ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಜಾಲಿ.ಒ.ಎ. ಮಾತನಾಡಿ ಕಂಪ್ಯೂಟರ್ ಸಾಕ್ಷರತಾ ವಿಷಯಗಳ ಬಗ್ಗೆ ಎಲ್ಲರೂ ತಿಳಿದಿರಬೇಕು, ಇದು ಇಂದಿನ ಆಧುನಿಕ ಯುಗಕ್ಕೆ ಅತ್ಯಗತ್ಯವಾಗಿದೆ ಎಂದು ತಿಳಿಸಿದರು.
ಮಹಿಳಾ ಕೋಶದ ಮುಖ್ಯಸ್ಥೆ ಹಾಗೂ ಇತಿಹಾಸ ಉಪನ್ಯಾಸಕಿಯಾದ ಗೀತಾ ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕಿಯಾದ ವಸಂತಿ ಸ್ವಾಗತಿಸಿದರು, ವಿದ್ಯಾರ್ಥಿನಿ ಕುಮಾರಿ ಧನ್ಯ ಕಾರ್ಯಕ್ರಮ ನಿರೂಪಿಸಿದರು, ವಿದ್ಯಾರ್ಥಿನಿ ಕುಮಾರಿ ಛಾಯಾ ವಂದಿಸಿದರು.