ಮುಂಡಾಜೆ: ಕಾರ್ಗಿಲ್ ವಿಜಯೋತ್ಸವ

ಶೇರ್ ಮಾಡಿ

ಮುಂಡಾಜೆ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ರೋವರ್ಸ್ & ರೇಂಜರ್ಸ್ ವಿಭಾಗದ ಸಹಯೋಗದಲ್ಲಿ ಕಾರ್ಗಿಲ್ ವಿಜಯೋತ್ಸವ ಮತ್ತು ಯೋಧ ನಮನ ಕಾರ್ಯಕ್ರಮ ನಡೆಯಿತು.

ಭಾರತೀಯ ಭೂಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ, ಸಂಸ್ಥೆಯ ಹಿರಿಯವಿದ್ಯಾರ್ಥಿ ಫ್ರಾನ್ಸಿಸ್.ಜೆ ವಿದ್ಯಾರ್ಥಿಗಳಿಗೆ ಭಾರತೀಯ ಭೂಸೇನೆಯ ಬಗ್ಗೆ ಮಾಹಿತಿಯನ್ನು ನೀಡಿದರು.

ವಿವೇಕಾನಂದ ಶಿಕ್ಷಣ ಸಂಸ್ಥೆಗಳು ಮುಂಡಾಜೆ, ಇದರ ಅಧ್ಯಕ್ಷರಾದ ವಿನಯ ಚಂದ್ರರವರು ಮಾತನಾಡಿ ವಿದ್ಯಾರ್ಥಿಗಳು ಭಾರತ ಮಾತೆಯ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದರು. ಕಾಲೇಜಿನ ಪ್ರಾಂಶುಪಾಲೆ ಜಾಲಿ ಓ.ಎ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ನಿವೃತ್ತ ಯೋಧರನ್ನು ಕಾಲೇಜಿನ ವತಿಯಿಂದ ಸನ್ಮಾನಿಸಲಾಯಿತು.

ಕಾರ್ಗಿಲ್ ವಿಜಯೋತ್ಸವದ ಪ್ರಯುಕ್ತ ಎನ್ಎಸ್ಎಸ್ ಸ್ವಯಂ ಸೇವಕರಿಗೆ ಏರ್ಪಡಿಸಿದ್ದ ಭಿತ್ತಿ ಪತ್ರಿಕೆ ರಚನೆ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದ ನಿರೂಪಣೆಯನ್ನು ಎನ್ಎಸ್ಎಸ್ ಸ್ವಯಂಸೇವಕಿ ಕುಮಾರಿ ತುಳಸಿ ನಿರ್ವಹಿಸಿದರು. ಎನ್ ಎಸ್ ಎಸ್ ಕಾರ್ಯಕ್ರಮಾಧಿಕಾರಿ ನಮಿತಾ ಸ್ವಾಗತಿಸಿ, ರೇಂಜರ್ ವಿದ್ಯಾರ್ಥಿನಿ ಕುಮಾರಿ ಸಂಪದ ವಂದಿಸಿದರು.

Leave a Reply

error: Content is protected !!