ಶಿರಾಡಿ ಘಾಟಿಯಲ್ಲಿ ಭೂಕುಸಿತ; ಘಾಟ್ ನಲ್ಲಿ ಸಂಚಾರ ಬಂದ್

ಶೇರ್ ಮಾಡಿ

ನೆಲ್ಯಾಡಿ : ಭಾರಿ ಮಳೆ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ನ ದೊಡ್ಡ ತಪ್ಲು ಎಂಬಲ್ಲಿ ಗುಡ್ಡ ಕುಸಿತಗೊಂಡು ಮಣ್ಣು ರಸ್ತೆಗೆ ಬಿದ್ದ ಪರಿಣಾಮ ಎರಡು ಕಾರು, ಒಂದು ಟಿಪ್ಪರ್ ಹಾಗೂ ಒಂದು ಟ್ಯಾಂಕರ್ ಕೆಸರಿನಲ್ಲಿ ಸಿಲುಕಿ ಗೊಂಡಿರುವ ಘಟನೆ ಜು.30ರಂದು ಮಧ್ಯಾಹ್ನದ ವೇಳೆಗೆ ನಡೆದಿದೆ.

ಭೂಕುಸಿತವಾದ ಹಿನ್ನೆಲೆಯಲ್ಲಿ ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್ ಆಗಿದೆ. ಶಿರಾಡಿ ಘಾಟ್ ನ ಸಕಲೇಶಪುರ – ಮಾರ್ನಳ್ಳಿ ನಡುವಿನ ದೊಡ್ಡ ತಪ್ಲು ಎಂಬಲ್ಲಿ ಗುಡ್ಡ ಕುಸಿತಗೊಂಡಿದೆ. ಮಣ್ಣು ಕುಸಿದು ಹೆದ್ದಾರಿಯಲ್ಲಿ ಸಂಚಾರ ಮಾಡುತ್ತಿದ್ದ ವಾಹನದ ಮೇಲೆ ಬಿದ್ದಿದೆ. ಎರಡು ಕಾರು, ಒಂದು ಟಿಪ್ಪರ್ ಹಾಗೂ ಒಂದು ಟ್ಯಾಂಕರ್ ಮೇಲೆ ಮಣ್ಣು ಕುಸಿದು ಬಿದ್ದಿದ್ದು ಮಣ್ಣಿನಲ್ಲಿ ಸಿಲುಕಿಕೊಂಡಿವೆ. ಅದೃಷ್ಟವಷಾತ್ ಯಾವುದೆ ಜೀವಹಾನಿ ಸಂಭವಿಸಿಲ್ಲ.

ವಾಹನ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್ ಮಾಡಲಾಗಿದೆ. ಇದರಿಂದಾಗಿ ವಾಹನಗಳು ಹಲವು ಕಿ.ಮೀ ದೂರ ನಿಂತಲ್ಲೆ ನಿಲ್ಲುವಂತಾಗಿದೆ. ಊಟ ತಿಂಡಿ ಇಲ್ಲದೆ ಪ್ರಯಾಣಿಕರು ಪರದಾಡುವ ಪರಿಸ್ಥಿತಿ ಉಂಟಾಗಿದೆ.

Leave a Reply

error: Content is protected !!