ನೇಸರ ಫೆ.22: ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಳದ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷ ಉಡುಪಿಯ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ದೇವಳದ ತೀರ್ಥಸ್ನಾನ ಪುಷ್ಕರಣಿಗೆ ಶಿಲಾನ್ಯಾಸವನ್ನು ಫೆ.20 ರಂದು ನೆರವೇರಿಸಿದರು.
ಈ ಸಂದರ್ಭ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಧಾನ ಅರ್ಚಕ ವೇದಮೂರ್ತಿ ಸೀತಾರಾಮ ಯಡಪಡಿತ್ತಾಯ,ಪವಿತ್ರಪಾಣಿ ರಾಧಾಕೃಷ್ಣ ಯಡಪಡಿತ್ತಾಯ, ಗ್ರಾಮ ಪಂಚಾಯತ್ ಅಧ್ಯಕ್ಷ ಯೋಗೀಶ್ ಆಲಂಬಿಲ,ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ವೇದಮೂರ್ತಿ ಕೆ.ಬಾಲಕೃಷ್ಣ ಕೆದಿಲಾಯ,ಸಮಿತಿಯ ಸದಸ್ಯರು, ದೇವಳದ ಅರ್ಚಕ ವೃಂದ ಹಾಗೂ ಭಕ್ತಾದಿಗಳು ಈ ಪುಣ್ಯ ಕಾರ್ಯದಲ್ಲಿ ಪಾಲ್ಗೊಂಡರು.
—ಜಾಹೀರಾತು—