ನೆಲ್ಯಾಡಿ ಸೂರ್ಯನಗರ ಶ್ರೀರಾಮ ವಿದ್ಯಾಲಯದಲ್ಲಿ ಸ್ವಾಸ್ಥ್ಯ ಸಂಕಲ್ಪ ಮಾಸಾಚರಣೆ

ಶೇರ್ ಮಾಡಿ

ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ ಸಿ ಟ್ರಸ್ಟ್ ಕಡಬ ತಾಲೂಕು ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ನೆಲ್ಯಾಡಿ ವಲಯದ ವತಿಯಿಂದ ಸ್ವಾಸ್ಥ್ಯ ಸಂಕಲ್ಪ ಮಾಸಾಚರಣೆ ಪ್ರಯುಕ್ತ ನೆಲ್ಯಾಡಿ ಸೂರ್ಯನಗರ ಶ್ರೀರಾಮ ವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಗೆ ದುಶ್ಚಟಗಳಿಂದ ದೂರವಿರಲು ಜಾಗೃತಿ ಮೂಡಿಸುವ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಅ.7ರಂದು ನಡೆಯಿತು.

ಶ್ರೀರಾಮ ಶಾಲೆಯ ಕಾರ್ಯದರ್ಶಿ ಮೂಲಚಂದ್ರ ಕಾಂಚನ ಕಾರ್ಯಕಮ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಗಣೇಶ್ ಕೈಕುರೆ ತಾಲೂಕು ಸದಸ್ಯರು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಡಬ ಇವರು ದುಶ್ಚಟಗಳಿಂದ ದೂರವಿದ್ದು ನಮ್ಮ ಆರೋಗ್ಯವನ್ನು ನಾವು ಕಾಪಾಡಿಕೊಳ್ಳಬೇಕು ಹಾಗೆಯೇ ಉತ್ತಮ ಮಾಹಿತಿಯನ್ನು ನೀಡಿದರು.

ಸಭಾಧ್ಯಕ್ಷತೆಯನ್ನು ನೆಲ್ಯಾಡಿ ವಲಯ ಜನಜಾಗೃತಿ ವೇದಿಕೆ ಅಧ್ಯಕ್ಷ ಜಯಾನಂದ ಬಂಟ್ರಿಯಾಲ್ ವಹಿಸಿ ಮಕ್ಕಳಿಗೆ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಗಣೇಶ್ ವಾಗ್ಗೆ ಮುಖ್ಯ ಗುರುಗಳು ಶ್ರೀರಾಮ ವಿದ್ಯಾಲಯ ಸೂರ್ಯನಗರ, ತುಕರಾಮ.ರೈ ಸದಸ್ಯರು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ನೆಲ್ಯಾಡಿ ವಲಯ,ಸೆಬಾಸ್ಟಿಯನ್.ಪಿ.ಜೆ ಅಧ್ಯಕ್ಷರು ಮಾದೇರಿ ಒಕ್ಕೂಟ, ನೆಲ್ಯಾಡಿ ಒಕ್ಕೂಟದ ಅಧ್ಯಕ್ಷ ಭಾಸ್ಕರ ಶೆಟ್ಟಿ ಭಾಗವಹಿಸಿದ್ದರು.

ನೆಲ್ಯಾಡಿ ವಲಯದ ಮೇಲ್ವಿಚಾರಕ ಆನಂದ ಡಿ.ಬಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಶ್ರೀರಾಮ ವಿದ್ಯಾಲಯದ ಶಿಕ್ಷಕಿ ಕಾವ್ಯ ವಂದಿಸಿದರು. ಸೇವಾಪ್ರತಿನಿಧಿಗಳಾದ ಸುಮನ. ಎಸ್ ಹಾಗೂ ಹೇಮಾವತಿ.ಜೆ ಸಹಕರಿಸಿದರು.

Leave a Reply

error: Content is protected !!