ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನಲ್ಲಿ ರಕ್ಷಾ ಬಂಧನ

ಶೇರ್ ಮಾಡಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ ಮತ್ತು ಆಂತರಿಕ ಗುಣಮಟ್ಟ ಭರವಸಾ ಕೋಶ ಹಾಗೂ ವಿದ್ಯಾರ್ಥಿ ಪರಿಷತ್ ಇದರ ಸಹಯೋಗದೊಂದಿಗೆ ರಕ್ಷಾ ಬಂಧನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಅಧ್ಯಕ್ಷತೆಯನ್ನು ಡಾ.ದಿನೇಶ ಪಿ.ಟಿ ಪ್ರಾಂಶುಪಾಲರು, ಕೆ.ಎಸ್.ಎಸ್ ಕಾಲೇಜು ಸುಬ್ರಹ್ಮಣ್ಯ ಅವರು ವಹಿಸಿದರು.

ಮುಖ್ಯ ಅತಿಥಿಯಾಗಿ ಚಿ.ನಾ.ಸೋಮೇಶ್, ಧಾರ್ಮಿಕ ಚಿಂತಕರು ಕೊಡಗು ಅವರು ರಕ್ಷಾಬಂಧನದ ಮಹತ್ವವನ್ನು ತಿಳಿಸಿದರು. ಡಾ.ಪ್ರಸಾದ.ಎನ್ ಮುಖ್ಯಸ್ಥರು ಇತಿಹಾಸ ವಿಭಾಗ ಹಾಗೂ ಕಾರ್ಯಕ್ರಮದ ಸಂಯೋಜಕರು ಉಪಸ್ಥಿತರಿದ್ದರು.

ಶಿವಪ್ರಸಾದ್ ವಾಣಿಜ್ಯಶಾಸ್ತ್ರ ಉಪನ್ಯಾಸಕರು ಸ್ವಾಗತಿಸಿದರು. ಅಶ್ವಿನಿ ವಾಣಿಜ್ಯಶಾಸ್ತ್ರ ಉಪನ್ಯಾಸಕಿ ವಂದಿಸಿದರು. ಕಲ್ಪನಾ.ವೈ ತೃತೀಯ ಬಿ.ಎ ಕಾರ್ಯಕ್ರಮವನ್ನು ನಿರೂಪಿಸಿದರು.

ಮುಖ್ಯ ಅತಿಥಿ ಬರೆದ ಭಗವಂತನ ಬೆಳಕು ಭಾರತ ಎಂಬ ಪುಸ್ತಕವನ್ನು ಕಾಲೇಜಿನ ಪ್ರಾಂಶುಪಾಲರು ಬಿಡುಗಡೆ ಮಾಡಿದರು. ವಿದ್ಯಾರ್ಥಿಗಳು ಸೋದರತ್ವ ಭಾಂದವ್ಯದೊಂದಿಗೆ ರಕ್ಷೆಯನ್ನು ಕಟ್ಟುವುದರ ಮೂಲಕ ಕಾರ್ಯಕ್ರಮವನ್ನು ಆಚರಿಸಲಾಯಿತು.

Leave a Reply

error: Content is protected !!