ಸಿಇಟಿ, ನೀಟ್ ನೈಜ ಸೀಟು ಹಂಚಿಕೆ ತಾತ್ಕಾಲಿಕ ಫಲಿತಾಂಶ ಪ್ರಕಟ: ಕೆಇಎ

ಶೇರ್ ಮಾಡಿ

ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್, ಎಂಜಿನಿಯರಿಂಗ್ ಸೇರಿದಂತೆ ಎಲ್ಲ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಸಂಬಂಧಿಸಿದಂತೆ ಮೊದಲ ಸುತ್ತಿನ ನೈಜ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಗುರುವಾರ ರಾತ್ರಿ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

ಫಲಿತಾಂಶ ಕುರಿತು ನಿರ್ದಿಷ್ಟವಾದ ಆಕ್ಷೇಪಣೆಗಳಿದ್ದಲ್ಲಿ ಮಾತ್ರ, ಅಂದರೆ ಆಪ್ಷನ್ ದಾಖಲಿಸಿದ್ದರೂ ಸೀಟು ಹಂಚಿಕೆಯಾಗದಿರುವ ಇತ್ಯಾದಿ ತಾಂತ್ರಿಕ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಆ.30ರ ಮಧ್ಯಾಹ್ನ 12 ಗಂಟೆ ಒಳಗೆ ಇ-ಮೇಲ್ ([email protected]) ಕಳುಹಿಸಬಹುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಆಕ್ಷೇಪಣೆಗಳನ್ನು ಪರಿಶೀಲಿಸಿ, ನೈಜವಾಗಿದ್ದರೆ ಮಾತ್ರ ಪರಿಗಣಿಸಲಾಗುತ್ತದೆ. ಬಳಿಕ ನೈಜ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಲಾಗುತ್ತದೆ. ನಂತರ ವಿವಿಧ ನಾಲ್ಕು ಚಾಯ್ಸ್‌ಗಳನ್ನು ನೀಡಲಾಗುವುದು ಎಂದು ಅವರು ವಿವರಿಸಿದ್ದಾರೆ.

ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆಸೆಟ್-24) ಗೆ ಅರ್ಜಿ ಸಲ್ಲಿಸಲು ಸೆ.2 ರವರೆಗೆ ವಿಸ್ತರಿಸಲಾಗಿದೆ. ಶುಲ್ಕ ಪಾವತಿಗೆ ಸೆ.3 ಕೊನೆ ದಿನ ಎಂದು ಪ್ರಸನ್ನ ತಿಳಿಸಿದ್ದಾರೆ.

ಜುಲೈ ತಿಂಗಳ ಮರು ಪರೀಕ್ಷೆಯಲ್ಲಿ ಅರ್ಹತೆ ಪಡೆದ ಡಿಪ್ಲೊಮಾ ಅಭ್ಯರ್ಥಿಗಳು, ಡಿಸಿಇಟಿ-24ಕ್ಕೆ ಹಾಜರಾಗದೇ ಇದ್ದಲ್ಲಿ 2ನೇ ಸುತ್ತಿನ ನಂತರ ಉಳಿದಿರುವ ಎಂಜಿನಿಯರಿಂಗ್, ಆರ್ಕಿಟೆಕ್ಚರ್ ಸೀಟುಗಳ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತದೆ ಎಂದು ಪ್ರಸನ್ನ ತಿಳಿಸಿದ್ದಾರೆ. ಮಾರ್ಗಸೂಚಿಗಳನ್ನು ಸದ್ಯದಲ್ಲೇ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ. ವಿವರಗಳಿಗೆ ವೆಬ್‌ಸೈಟ್‌ಗೆ ಭೇಟಿ ನೀಡಬೇಕು ಎಂದು ಅವರು ತಿಳಿಸಿದ್ದಾರೆ.

Leave a Reply

error: Content is protected !!