ನೆಲ್ಯಾಡಿ ಜೇಸಿ ಸಪ್ತಾಹ ‘ಡೈಮಂಡ್-2024’-ಮಹಿಳಾ ದಿನಾಚರಣೆ

ಶೇರ್ ಮಾಡಿ

ನೆಲ್ಯಾಡಿ: ಜೇಸಿಐ ನೆಲ್ಯಾಡಿ, ಮಹಿಳಾ ಜೇಸಿ ಹಾಗೂ ಜೂನಿಯರ್ ಜೇಸಿವಿಂಗ್ ನೆಲ್ಯಾಡಿ ಇದರ 41ನೇ ವರ್ಷದ ಜೇಸಿ ಸಪ್ತಾಹ ‘ಡೈಮಂಡ್-2024’ ಮಹಿಳಾ ದಿನಾಚರಣೆ ನೆಲ್ಯಾಡಿ ಪಿಎಂಶ್ರೀ ಸರಕಾರಿ ಶಾಲೆಯಲ್ಲಿ ನಡೆಯಿತು.

ನೆಲ್ಯಾಡಿ ಜೇಸಿಐ ಅಧ್ಯಕ್ಷೆ ಸುಚಿತ್ರಾ ಜೆ.ಬಂಟ್ರಿಯಾಲ್ ಅಧ್ಯಕ್ಷತೆ ವಹಿಸಿದ್ದರು. ನೆಲ್ಯಾಡಿ ಕಾಮಧೇನು ಮಹಿಳಾ ಸಹಕಾರಿ ಸಂಘದ ಅಧ್ಯಕ್ಷೆ ಉಷಾ ಅಂಚನ್ ಅವರು ಉದ್ಘಾಟಿಸಿ ಮಾತನಾಡಿದ ಅವರು ಮಹಿಳೆಯರು ತಮಗೆ ಸಿಕ್ಕ ಅವಕಾಶ ಸದುಪಯೋಗಪಡಿಸಿಕೊಳ್ಳಬೇಕು. ಯಾವುದೇ ಟೀಕೆಗಳೂ ಕಿವಿಗೊಡದೇ ಮುನ್ನಡೆಯಬೇಕೆಂದು ಹೇಳಿದರು.

ಅತಿಥಿಗಳಾಗಿದ್ದ ನೆಲ್ಯಾಡಿ ಗ್ರಾ.ಪಂ.ಸದಸ್ಯೆ ಉಷಾಜೋಯಿ, ಸೇವಾಪ್ರತಿನಿಧಿ ಹೇಮಾವತಿ, ಕೊಲ್ಯೊಟ್ಟು ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಸಂಪಾವತಿ, ನೆಲ್ಯಾಡಿ ಜೇಸಿಐನ ಪೂರ್ವಾಧ್ಯಕ್ಷ ಕೆ.ಯಂ.ದಯಾಕರ ರೈ ಅವರು ಸಂದರ್ಭೋಚಿತವಾಗಿ ಮಾತನಾಡಿದರು.

ಕೋಶಾಧಿಕಾರಿ ಸುಪ್ರಿತಾರವಿಚಂದ್ರ ಜೇಸಿವಾಣಿ ವಾಚಿಸಿದರು, ಅಧ್ಯಕ್ಷೆ ಸುಚಿತ್ರಾ ಜೆ.ಬಂಟ್ರಿಯಾಲ್ ಸ್ವಾಗತಿಸಿ, ನಿರೂಪಿಸಿದರು. ಜೊತೆ ಕಾರ್ಯದರ್ಶಿ ಜಾಹ್ನವಿ ವಂದಿಸಿದರು.

ಯೋಜನಾ ನಿರ್ದೇಶಕರಾದ ಜಯಾನಂದ ಬಂಟ್ರಿಯಾಲ್, ಪುರಂದರ ಗೌಡ ಡೆಂಜ, ನೆಲ್ಯಾಡಿ ಜೇಸಿಐನ ಪೂರ್ವಾಧ್ಯಕ್ಷರು, ಸದಸ್ಯರು, ಆಶಾಕಾರ್ಯಕರ್ತೆ ಮತ್ತಿತರರು ಉಪಸ್ಥಿತರಿದ್ದರು.

Leave a Reply

error: Content is protected !!