ರಾಪಿಡ್ ಏಕ್ಷನ್ ಫೋರ್ಸ್ ನ ಗೂಡ್ಸ್ ಲಾರಿ ಪಲ್ಟಿ

ಶೇರ್ ಮಾಡಿ

ರಾಪಿಡ್ ಏಕ್ಷನ್ ಫೋರ್ಸ್ ನ ಗೂಡ್ಸ್ ಲಾರಿಯೊಂದು ಮಗುಚಿ ಬಿದ್ದ ಘಟನೆ ಸೋಮವಾರ ಬಂಟ್ವಾಳ ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಮೂರ್ಜೆ ಸಮೀಪದ ಕುದ್ರೋಟಿಕಟ್ಟೆ ಎಂಬಲ್ಲಿ ಸಂಭವಿಸಿದೆ.

ಆರ್ ಎ ಎಫ್ ನ ಲಗೇಜು ತುಂಬಿದ ಲಾರಿ ಭದ್ರಾವತಿಯಿಂದ ಬಿ.ಸಿ.ರೋಡ್ ಗೆ ಹೋಗುತ್ತಿರುವಾಗ ಕುದ್ರೋಟಿಕಟ್ಟೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿತ್ತು.

ಅಪಘಾತದಿಂದ ಚಾಲಕ ಸಣ್ಣ ಪುಟ್ಟ ಗಾಯಗೊಂಡಿದ್ದು, ಮತ್ತೋರ್ವ ಪ್ರಯಾಣಿಕ ಸಾಂತಪ್ಪ ನಾಯಕ್ ಅವರನ್ನು ಚಿಕಿತ್ಸೆಗೆ ಮಂಗಳೂರು ಸರಕಾರಿ ಆಸ್ಪತ್ರೆ ಗೆ ದಾಖಲಿಸಲಾಗಿದೆ.

Leave a Reply

error: Content is protected !!