
ನೇಸರ ಫೆ.26:ಯುವಶಕ್ತಿಯು ಸಮಾಜದ ಹಿತಕ್ಕೆ ಬಳಕೆಯಾಗಬೇಕು,ನಾಯಕತ್ವದ ಗುಣಗಳನ್ನು ಮೈಗೂಡಿಸಿಕೊಳ್ಳುವ ಮೂಲಕ ನಿಸ್ವಾರ್ಥವಾಗಿ ರಾಷ್ಟ್ರ ಸೇವೆಯಲ್ಲಿ ಕೈಜೋಡಿಸಬೇಕೆಂದು.ರಾಷ್ಟ್ರೀಯ ಸೇವಾ ಯೋಜನೆ ಘಟಕದ ಉದ್ಘಾಟನೆ ಹಾಗೂ ಮಾಹಿತಿ ಕಾರ್ಯಗಾರವನ್ನು ನೆಲ್ಯಾಡಿ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಫೆ.25 ರಂದು ಉದ್ಘಾಟಿಸಿ ಕಾಲೇಜಿನ ಸಂಯೋಜಕರಾದ ಡಾ.ಜಯರಾಜ್.ಎನ್ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಶ್ರೀ ಕ್ಷೇತ್ರ ಸೌತಡ್ಕ ದಲ್ಲಿ ಮೂಡಪ್ಪ ಸೇವೆಯ
ಅಪೂರ್ವ ಕ್ಷಣ ತಪ್ಪದೇ ವೀಕ್ಷಿಸಿ Subscribers ಮಾಡಿ

ಸಂಪನ್ಮೂಲ ವ್ಯಕ್ತಿಯಾಗಿ ಡಾ.ನಾಗರತ್ನ.ಕೆ.ಎ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಯೋಜನಾಧಿಕಾರಿಗಳು ಮಂಗಳೂರು ವಿಶ್ವವಿದ್ಯಾನಿಲಯ ಇವರು ಮಾತನಾಡಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸ್ವಯಂಸೇವಕರಾಗಿ ವಿದ್ಯಾರ್ಥಿಗಳು ಹೇಗೆ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದು ಮಾಹಿತಿ ನೀಡುವುದರ ಜೊತೆಗೆ ವಿದ್ಯಾರ್ಥಿಗಳು ಮಾನವೀಯತೆಯನ್ನು ಮೈಗೂಡಿಸಿಕೊಳ್ಳುವ ಮೂಲಕ ಯಾವುದೇ ರೀತಿಯ ಪ್ರತಿಫಲಾಪೇಕ್ಷೆಯಿಲ್ಲದೆ ಸಮಾಜಕ್ಕೆ ಸೇವೆ ಮಾಡಬೇಕು ಎನ್ನುವ ಮೂಲಕ ಘಟಕದ ಮಹತ್ವವನ್ನು ತಿಳಿಸಿಕೊಟ್ಟರು. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಯೋಜನಾಧಿಕಾರಿರವರು ಸಂಪನ್ಮೂಲ ವ್ಯಕ್ತಿಗಳ ಕಿರುಪರಿಚಯವನ್ನು ಸಭೆಗೆ ಮಾಡಿದರು. ವಿದ್ಯಾರ್ಥಿಗಳಾದ ಆಯುಷ್ಯ ಮತ್ತು ತಂಡದವರು ಪ್ರಾರ್ಥನೆಯನ್ನು ನೆರವೇರಿಸಿದರು. ವಿಶಾಲ್ ಸ್ವಾಗತಿಸಿ,ಮೋಹನ್ ಮತ್ತು ತಂಡ ರಾಷ್ಟ್ರೀಯ ಸೇವಾ ಯೋಜನೆಯ ಗೀತೆಯನ್ನು ಹಾಡಿದರು.ವಿದ್ಯಾರ್ಥಿನಿ ಭಾರತಿ ವಂದಿಸಿದರು.ಧನ್ಯಶ್ರೀ ಕಾರ್ಯಕ್ರಮವನ್ನು ನಿರೂಪಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರು,ಬೋಧಕೇತರ ಸಿಬ್ಬಂದಿಗಳು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
—ಜಾಹೀರಾತು—


