
ನೆಲ್ಯಾಡಿ: ದಕ ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ, ಜಿಲ್ಲಾ ಉಪನಿರ್ದೇಶಕರ ಕಚೇರಿ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಮಂಗಳೂರು, ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ದಕ್ಷಿಣ ಕನ್ನಡ ಮತ್ತು ಮಂಗಳೂರು, ಎಸ್.ಡಿ.ಎಂ ಮಂಗಳ ಜ್ಯೋತಿ ಸಮಗ್ರ ಶಾಲೆ ವಾಮಂಜೂರು ಇದರ ಜಂಟಿ ಆಶಯದಲ್ಲಿ ಜಿಲ್ಲಾಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಬಾಲಕಿಯರ ಕರಾಟೆ ಪಂದ್ಯಾಟ ಸೆ.25ರಂದು ಮಂಗಳ ಜ್ಯೋತಿ ಶಾಲಾ ಸಭಾಂಗಣನಲ್ಲಿ ನಡೆಯಿತು.
ಸ್ಪರ್ಧೆಯಲ್ಲಿ ನೆಲ್ಯಾಡಿ ಬೆಥನಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಾದ ಚೆರಿ ಜಿಲ್ಲಾ ಮಟ್ಟದಲ್ಲಿ ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಹಾಗೂ ಜೈರ ಮಾಲಿಕ್ ಕಂಚಿನ ಪದಕದೊಂದಿಗೆ ವಿಜೇತರಾಗಿದ್ದಾರೆ.
ಸಂಸ್ಥೆಯ ಪ್ರಾಚಾರ್ಯ ಡಾ.ವರ್ಗೀಸ್ ಕೈಪನಡ್ಕ ವಿಜೇತರನ್ನು ಅಭಿನಂದಿಸಿದರು.





