
ಕಡಬ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ಆಚರಿಸಲಾಯಿತು.
ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಸಂಚಾಲಕ ವಂ.ಪ್ರಕಾಶ್ ಪೌಲ್ ಡಿಸೋಜಾ ವಿದ್ಯಾರ್ಥಿಗಳು ರಾಷ್ಟಪಿತ ಗಾಂಧೀಜಿ ಮತ್ತು ಶಾಸ್ತ್ರಿಯವರ ಆದರ್ಶಗಳನ್ನು ತಮ್ಮ ಜೀವನದಲ್ಲಿ ಪಾಲಿಸಿಕೊಳ್ಳಬೇಕು ಎಂದು ಹೇಳಿದರು.

ವಿದ್ಯಾರ್ಥಿಗಳಾದ ಕುಮಾರಿ ಧನ್ವಿ ಮತ್ತು ಲಿಖಿತ ದಿನದ ಮಹತ್ವದ ಬಗ್ಗೆ ಹೇಳಿದರು. ವಿದ್ಯಾರ್ಥಿಗಳ ದೇಶ ಭಕ್ತಿ ಗೀತೆಯು ಕಾರ್ಯಕ್ರಮಕ್ಕೆ ಇನ್ನಷ್ಟು ಮೆರಗು ತಂದಿತು.
ವೇದಿಕೆಯಲ್ಲಿ ಶಾಲೆಯ ಮುಖ್ಯಸ್ಥರುಗಳಾದ ವಂ.ಅಮಿತ್ ಪ್ರಕಾಶ್ ರೋಡ್ರಿಗಸ್, ದಕ್ಷ ಉಪಸ್ಥಿತರಿದ್ದರು.ಸಹ ಶಿಕ್ಷಕಿ ಶಿಲ್ಪಾ ಸ್ವಾಗತಿಸಿದರು, ಪ್ರೇಮಲತಾ ವಂದಿಸಿದರು. ಸಂಗೀತ ಕಾರ್ಯಕ್ರಮವನ್ನು ನಿರೂಪಿಸಿದರು. ಬಳಿಕ ವಿದ್ಯಾರ್ಥಿಗಳಿಂದ ಶಾಲಾ ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.





