ಧಾರಾಕಾರ ಮಳೆ: ಚಾರ್ಮಾಡಿ ಘಾಟ್‌ನಲ್ಲಿ ಮತ್ತೆ ಗುಡ್ಡ ಕುಸಿತ

ಶೇರ್ ಮಾಡಿ

ಬೆಳ್ತಂಗಡಿ: ಕಳೆದ ಎರಡು ಗಂಟೆಗಳಿಂದ ಭಾರಿ ಮಳೆಯಾಗುತ್ತಿದ್ದು, ಇದರ ಪರಿಣಾಮ ಚಾರ್ಮಾಡಿ ಘಾಟ್​ನಲ್ಲಿ ಸಾಲು ಸಾಲು ಗುಡ್ಡ ಕುಸಿತವಾಗಿದೆ. ಮತ್ತೊಂದೆಡೆ ಮಳೆ ನೀರು ರಸ್ತೆಯ ಮೇಲೆ ನದಿಯಂತೆ ಹರಿಯುತ್ತಿದೆ. ಇದರಿಂದ ಚಾರ್ಮಾಡಿ ಘಾಟ್‌ನಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದ್ದು, ಹಿಂದಕ್ಕೆ ಹೋಗದೇ ಮುಂದಕ್ಕೆ ಹೋಗಲು ಆಗದೇ ವಾಹನ ಸವಾರರು ತೀವ್ರ ಪರದಾಡುತ್ತಿದ್ದಾರೆ.

ಕೊಟ್ಟಿಗೆಹಾರ, ಬಾಳೂರು, ಬಣಕಲ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅ.09 ಸಂಜೆ ಕಳೆದ ಎರಡು ಗಂಟೆಯಿಂದ ನಿರಂತರವಾಗಿ ಎಡಬಿಡದೇ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಚಾರ್ಮಾಡಿ ಘಾಟಿನಲ್ಲಿ ಗುಡ್ಡ ಕುಸಿದಿದೆ. ಭಾರೀ ಮಳೆಯಿಂದಾಗಿ ಚಿಕ್ಕಮಗಳೂರು-ದಕ್ಷಿಣ ಕನ್ನಡ ಜಿಲ್ಲೆಗೆ ಸಂಪರ್ಕಿಸುವ ಚಾರ್ಮಾಡಿ ಘಾಟಿಯಲ್ಲಿ ಫುಲ್ ಟ್ರಾಫಿಕ್ ಜಾಮ್ ಆಗಿದೆ.ಮಂಗಳೂರಿನ ಬೆಳ್ತಂಗಡಿ ತಾಲೂಕಿನ ಸುತ್ತಮುತ್ತ ಧಾರಾಕಾರ ಮಳೆಯಾಗುತ್ತಿದೆ. ಇದರಿಂದ ಕಕ್ಕಿಂಜೆ, ಚಾರ್ಮಾಡಿ ಘಾಟ್ ​ರಸ್ತೆಗಳು ಜಲಮಯವಾಗಿದೆ. ಚಾರ್ಮಾಡಿಯ 3ನೇ ತಿರುವಿನಲ್ಲಿ ರಸ್ತೆ ಮೇಲೆ ನೀರು ನದಿಯಂತೆ ಹರಿಯುತ್ತಿದೆ. ಅಲ್ಲದೇ ನೆರಿಯಾ, ಪುಲ್ಲಾಜೆ ಸೇತುವೆಗಳು ಮುಳುಗಡೆಯಾಗಿವೆ. ಇದರಿಂದ ವಾಹನ ಸಂಚಾರ ಮತ್ತು ಜನಜೀವನ ಅಸ್ತವ್ಯವಾಗಿದೆ.

Leave a Reply

error: Content is protected !!