ಬೆಳ್ತಂಗಡಿ: ನಿಡಿಗಲ್ ಸಮೀಪ ಪಾದಾಚಾರಿಗೆ ಬಸ್ ಡಿಕ್ಕಿ ಹೊಡೆದ ಘಟನೆ ಬುಧವಾರ ಸಂಭವಿಸಿದೆ. ಸ್ಥಳೀಯವಾಗಿ ವ್ಯಾಪಾರ ಮಾಡಿಕೊಂಡಿರುವ ದಿನೇಶ್ ನಾಯ್ಕ (32) ಎಂಬವರೇ ಗಾಯಗೊಂಡ ವ್ಯಕ್ತಿಯಾಗಿದ್ದಾರೆ.
ಕೆ.ಎಸ್.ಆರ್.ಟಿ.ಸಿ ಬಸ್ಸು ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಡಿಕ್ಕಿಹೊಡೆದಿದೆ. ಹೊಡೆತದ ರಭಸಕ್ಕೆ ರಸ್ತೆಗೆ ಬಿದ್ದ ಪಾದಾಚಾರಿ ದಿನೇಶ್ ಗಂಭೀರವಾಗಿ ಗಾಯಗೊಂಡಿದ್ದಾರೆ ಅವರನ್ನು ಕೂಡಲೇ ಸ್ಥಳೀಯರ ಸಹಕಾರದೊಂದಿಗೆ ಸ್ಥಳಿಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳ್ತಂಗಡಿ
ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.