ಬೆಳ್ತಂಗಡಿ: ಲಾಯಿಲ ಕಾಶಿಬೆಟ್ಟು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಉಡುಪಿಯಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ನಿರ್ಮಾಣ ಹಂತದಲ್ಲಿರುವ ಮೋರಿಗೆ ಬಿದ್ದ ಘಟನೆ ಬುಧವಾರ ಮುಂಜಾನೆ ನಡೆದಿದೆ.
ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದೆ.
ಇಲ್ಲಿ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು ಅವೈಜ್ಞಾನಿಕ ಕಾಮಗಾರಿ ನಡೆಸಲಾಗಿದ್ದು ರಸ್ತೆ ಬದಿಯಲ್ಲಿ ಅಲ್ಲಲ್ಲಿ ಕಾಂಕ್ರೀಟ್ ಚರಂಡಿಗಳನ್ನು ಮಾಡಿಡಲಾಗಿದೆ. ಯಾವುದೇ ಸೂಚನಾ ಫಲಕಗಳೂ ಇಲ್ಲವಾಗಿದ್ದು ಮಳೆಯಿಂದಾಗಿ ರಸ್ತೆ ಜಾರುವ ಸ್ಥಿತಿಯಲ್ಲಿದೆ. ವಾಹನ ಚಾಲಕರು ಜಾಗರೂಕತೆಯಿಂದ ವಾಹನ ಚಲಾಯಿಸಬೇಕಾದ ಅನಿವಾರ್ಯತೆಯಿದೆ.