ಹಿಂದೂ ಸಂಘಟನೆಯ ಕಾರ್ಯಕರ್ತರ ಬಗ್ಗೆ ಮತ್ತು ಬಿಲ್ಲವ ಸಮಾಜದ ಹೆಣ್ಣುಮಕ್ಕಳ ಬಗ್ಗೆ ಹಾಗೂ ಭಜನೆ ಮಾಡುವ ಹೆಣ್ಣು ಮಕ್ಕಳ ಬಗ್ಗೆ ಕೀಳುಮಟ್ಟದ ಪದ ಬಳಸಿ ಅವಮಾನ ಮಾಡಿರುವ ಆರೋಪದ ಮೇರೆಗೆ ಉಪವಲಯಾರಣ್ಯಾಧಿಕಾರಿ ಸಂಜೀವ ಪೂಜಾರಿಯವರನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ.
ಅರಣ್ಯಾಧಿಕಾರಿ ಸಂಜೀವ ಪೂಜಾರಿ ವಿರುದ್ಧ ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ಭಜನೆ ಮಾಡುವ ಮೂಲಕ ಪುತ್ತೂರು ಡಿವೈಎಸ್ಪಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಅಲ್ಲದೆ ಹಿಂದೂ ಸಂಘಟನೆಯ ಮುಖಂಡರು ಪೊಲೀಸ್ ಠಾಣೆಗೆ ಭೇಟಿ ನೀಡಿ ಆರೋಪಿ ಸಂಜೀವ ಪೂಜಾರಿಯವರನ್ನು ಬಂಧಿಸುವಂತೆ ಆಗ್ರಹಿಸಿದ್ದರು.
ಇದೀಗ ಬೆಳ್ಳಾರೆ ಪೊಲೀಸರು ಆರೋಪಿ ಪೂಜಾರಿಯವರನ್ನು ಬಂಧಿಸಿದ್ದಾರೆ.