17ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಸಮಗ್ರ ಚಾಂಪಿಯನ್ ಪ್ರಶಸ್ತಿ

ನೆಲ್ಯಾಡಿ:: ಸಾ0ದೀಪನಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ನರಿಮೊಗರು ಇಲ್ಲಿ ನಡೆದ ಪ್ರೌಢಶಾಲಾ ವಿಭಾಗದ ಪುತ್ತೂರು ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ನೂಜಿಬಾಳ್ತಿಲ ಬೆಥನಿ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ಭಾಗವಹಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆ.
10ನೇ ತರಗತಿಯ ಪ್ರಮೀಳಾ 800, 1500, 3000 ಮೀಟರ್ ಓಟದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರು ವೈಯಕ್ತಿಕ ಚಾಂಪಿಯನ್ ಪಟ್ಟ ಪಡೆದಿರುತ್ತಾರೆ. 9ನೇ ತರಗತಿಯ ಅಪೇಕ್ಷ 400 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ, 400 ಮೀಟರ್ ಅಡೆತಡೆ ಓಟದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆ. 3 ಕಿ.ಮೀ. ವೇಗದ ನಡಿಗೆ ಸ್ಪರ್ಧೆಯಲ್ಲಿ 10ನೇ ತರಗತಿಯ ಚೈತನ್ಯ ಪ್ರಥಮ ಸ್ಥಾನ 9ನೇ ತರಗತಿಯ ಪ್ರಜ್ಞ ದ್ವಿತೀಯ ಸ್ಥಾನವನ್ನು ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆ. ಬಾಲಕಿಯರ ವಿಭಾಗದಲ್ಲಿ 4×400 ಮೀಟರ್ ರಿಲೇ ಓಟದಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆ.
ಕ್ರೀಡಾ ಕ್ಷೇತ್ರದಲ್ಲಿ ನಿರಂತರ ಸಾಧನೆಯ ದಾಪುಗಾಲನ್ನಿಡುತ್ತ ಮುನ್ನುಗ್ಗುತ್ತಿರುವ ಬೆಥನಿ ವಿದ್ಯಾಸಂಸ್ಥೆ ನೂಜಿಬಾಳ್ತಿಲದ ಮುಕುಟಕ್ಕೆ ಮತ್ತೊಂದು ಕಿರೀಟವೆಂಬಂತೆ ಪ್ರೌಢಶಾಲಾ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಮಹಿಳೆಯರ 17ರ ವಯೋಮಾನದಲ್ಲಿ ಸಮಗ್ರ ಚಾಂಪಿಯನ್ ಪ್ರಶಸ್ತಿ ಗಳಿಸಿದೆ.
ಈ ಸಾಧನೆಗಾಗಿ ಶ್ರಮಿಸಿದ ಕ್ರೀಡಾಪಟುಗಳಿಗೆ ಸಹಕಾರ ನೀಡಿದ ಪಾಲಕರಿಗೆ, ಹಿರಿಯ ವಿದ್ಯಾರ್ಥಿಗಳಿಗೆ, ನಿರ್ದೇಶನ ನೀಡಿದ ಆಡಳಿತ ಮಂಡಳಿಗೆ, ಪ್ರಾಂಶುಪಾಲರು ಮುಖ್ಯ ಶಿಕ್ಷಕರು ಹಾಗು ಎಲ್ಲಾ ಸಿಬ್ಬಂದಿ ವರ್ಗದವರಿಗೆ ಹಾಗು ತರಬೇತಿ ನೀಡಿದ ದೈಹಿಕ ಶಿಕ್ಷಕರಾದ ಮತ್ತಾಯಿ ಹಾಗು ಪುನೀತ್ ಅವರಿಗೆ ಕೃತಜ್ಞತೆ ಸಲ್ಲಿಸಿದ ಪ್ರಾಂಶುಪಾಲರು ಹಾಗೂ ಆಡಳಿತ ಮಂಡಳಿ.





