
ನೆಲ್ಯಾಡಿ: ಸಾಂದೀಪನಿ ವಿದ್ಯಾಸಂಸ್ಥೆ ನರಿಮೊಗರು ಆಯೋಜಿಸಿದ ಪುತ್ತೂರು ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆ ವಿದ್ಯಾರ್ಥಿಗಳು ಪ್ರಶಸ್ತಿಗಳನ್ನು ಗೆದ್ದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.
17ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಬೆಲ್ಸಿಟಾ ಜಾಸ್ಮಿನ್ 100 ಮೀಟರ್ ಹಾಗೂ 200 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಹಾಗೂ ಚಂದನ ಕೆ.ವಿ ಡಿಸ್ಕಸ್ ಎಸೆತ ದಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.
ಶಾರೀರಿಕ ನಿರ್ದೇಶಕರಾದ ಮಹಮ್ಮದ್ ಹಾರೀಸ್ ಅವರು ತರಬೇತಿ ನೀಡಿರುತ್ತಾರೆ. ವಿದ್ಯಾರ್ಥಿಗಳ ಕ್ರೀಡಾ ಸಾಧನೆಯನ್ನು ವಿದ್ಯಾಸಂಸ್ಥೆಯ ಕಾರ್ಯದರ್ಶಿ ಅಬ್ರಹಾಂ ವರ್ಗೀಸ್, ಸಂಚಾಲಕರಾದ ರೆ.ಫಾ. ನೋಮಿಸ್ ಕುರಿಯಕೋಸ್, ವಿದ್ಯಾಸಂಸ್ಥೆಯ ಮುಖ್ಯಸ್ಥರು ಹಾಗೂ ಶಿಕ್ಷಕ – ಶಿಕ್ಷಕೇತರ ವರ್ಗದವರು ಅಭಿನಂದನೆ ಸಲ್ಲಿಸಿದರು.





