
ಬೈಕ್ ಗೆ ಖಾಸಗಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಬೈಕಿನಲ್ಲಿದ್ದ ಓರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಮಾರಿಪ್ಪಳ್ಳ ಸಮೀಪದ ಕಡೆಗೋಳಿ ಎಂಬಲ್ಲಿ ರವಿವಾರ ರಾತ್ರಿ ಸಂಭವಿಸಿದೆ.ಮೃತರನ್ನು ಕಡೆಗೋಳಿ ನಿವಾಸಿ ಪ್ರವೀಣ್(30) ಮೃತಪಟ್ಟವರು. ಬೈಕಿನಲ್ಲಿ ಜೊತೆಗಿದ್ದ ಸ್ನೇಹಿತ ಸಂದೀಪ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರಿಬ್ಬರು ಸೇಲ್ಸ್ ಮ್ಯಾನ್ ಕೆಲಸಗಾರರಾಗಿದ್ದು, ಕಳೆದ ರಾತ್ರಿ ಕೆಲಸ ಮುಗಿಸಿ ಮನೆಗೆ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಕಡೆಗೋಳಿಯಲ್ಲಿ ಸೆಲಿನ ಹೆಸರಿನ ಖಾಸಗಿ ಬಸ್ ಢಿಕ್ಕಿ ಹೊಡೆದಿದೆ. ಅಪಘಾತ ಸಂಭವಿಸಿದ ತಕ್ಷಣ ಬಸ್ ಚಾಲಕ ಬಸ್ ನಿಂದ ಇಳಿದು ಪರಾರಿಯಾಗಿದ್ಧಾನೆ.
ಬಸ್ ಚಾಲಕನ ಅತಿವೇಗದ ಮತ್ತು ಅಜಾಗರೂಕತೆಯ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಬಸ್ಸಿನಡಿಗೆ ದ್ವಿಚಕ್ರ ವಾಹನದೊಂದಿಗೆ ಸಿಲುಕಿದವರನ್ನು ಆಸ್ಪತ್ರೆಗೆ ಸಾಗಿಸಿದ ಸ್ಥಳೀಯರು ಚಾಲಕನ ಅಜಾಗರೂಕತೆಯ ಚಾಲನೆಗೆ ಆಕ್ರೋಶ ವ್ಯಕ್ತಪಡಿಸಿದರು ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೊಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.





