ಕೆಎಸ್ಸಾರ್ಟಿಸಿ ಬಸ್‌ ಢಿಕ್ಕಿ; ದ್ವಿಚಕ್ರ ವಾಹನ ಸವಾರೆ ವಿದ್ಯಾರ್ಥಿನಿ ಮೃತ್ಯು

ಶೇರ್ ಮಾಡಿ

ಕೆಎಸ್ಸಾರ್ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ನಡುವಿನ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರೆ ಕಾಲೇಜು ವಿದ್ಯಾರ್ಥಿನಿ ಮೃತಪಟ್ಟು, ಸಹೋದರಿ ಗಂಭೀರ ಗಾಯಗೊಂಡ ಘಟನೆ ಸುಳ್ಯದ ಪರಿವಾರಕಾನ -ಉಬರಡ್ಕ ರಸ್ತೆಯ ಸೂಂತೋಡು ಎಂಬಲ್ಲಿ ಶುಕ್ರವಾರ ಸಂಜೆ ಸಂಭವಿಸಿದೆ.

ಪುತ್ತೂರಿನ ಖಾಸಗಿ ಕಾಲೇಜಿನ ದ್ವಿತೀಯ ಪದವಿ ವಿದ್ಯಾರ್ಥಿನಿ, ಉಬರಡ್ಕ ಮಿತ್ತೂರು ಗ್ರಾಮದ ನಾರಾಯಣ ಕಾಡುತೋಟ ಎಂಬವರ ಪುತ್ರಿ ರಚನಾ (20) ಮೃತರು. ಆಕೆಯ ಸಹೋದರಿ ಸಹ ಸವಾರೆಯಾಗಿದ್ದ ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನ ಹತ್ತನೇ ತರಗತಿ ವಿದ್ಯಾರ್ಥಿನಿ ಅನನ್ಯ (16) ಎಂಬವರು ಗಂಭೀರ ಗಾಯಗೊಂಡಿದ್ದಾರೆ.

ರಚನಾ ಅವರು ತಮ್ಮ ದ್ವಿಚಕ್ರ ವಾಹನದಲ್ಲಿ ಸಹೋದರಿ ಅನನ್ಯ ಅವರನ್ನು ಕುಳ್ಳಿರಿಸಿಕೊಂಡು ಸುಳ್ಯದಿಂದ ತಮ್ಮ ಮನೆಗೆ ತೆರಳುತ್ತಿದ್ದ ವೇಳೆ ಸುಳ್ಯ ಕಡೆಗೆ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಸೂಂತೋಡು ಎಂಬಲ್ಲಿ ಢಿಕ್ಕಿಯಾಗಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ರಚನಾ ಅವರು ಆಸ್ಪತ್ರೆಯಲ್ಲಿ ಮೃತರಾಗಿದ್ದಾರೆ. ಸಹ ಸವಾರೆ ಅನನ್ಯ ಅವರ ಕಾಲಿಗೆ ಗಂಭೀರ ಗಾಯವಾಗಿದ್ದು ಅವರನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಳ್ಯ ಪೊಲೀಸರು ಪರಿಶೀಲನೆ ನಡೆಸಿ ಕೇಸು ದಾಖಲಿಸಿಕೊಂಡಿದ್ದಾರೆ.

Leave a Reply

error: Content is protected !!