
ನೆಲ್ಯಾಡಿ: ಕೋಲಾರ ಜಿಲ್ಲೆಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ನೆಲ್ಯಾಡಿ ಶ್ರೀರಾಮ ವಿದ್ಯಾಲಯದ ವಿದ್ಯಾರ್ಥಿ ನೆಲ್ಯಾಡಿ ಸೂರ್ಯ ನಗರ ನಿವಾಸಿ ಭಾಸ್ಕರ್ ಶೆಟ್ಟಿ, ಸುಮಲತಾ ದಂಪತಿಯ ಪುತ್ರ ಮನೀಶ್.ಬಿ.ಶೆಟ್ಟಿ ಉದ್ದಜಿಗಿತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿ ಮುಂದೆ ಉತ್ತರ ಪ್ರದೇಶದ ಲಕ್ನೋ ದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲು ಆಯ್ಕೆಯಾಗಿರುತ್ತಾರೆ.





