
ಮುಲ್ಕಿ: ಪತ್ನಿ, ಮಗುವನ್ನು ಕೊಂದು ಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಇಬ್ಬರನ್ನು ಮುಲ್ಕಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮೃತ ಕಾರ್ತಿಕ್ ತಾಯಿ ಶ್ಯಾಮಲಾ ಭಟ್, ಸಹೋದರಿ ಕಣ್ಮಣಿ ಬಂಧಿತರು. ಆತ್ಮಹತ್ಯೆಗೆ ಮೊದಲು ಕೌಟುಂಬಿಕ ಕಲಹದ ಬಗ್ಗೆ ಕಾರ್ತಿಕ್ ಭಟ್ ಡೆತ್ ನೋಟ್ ಬರೆದಿದ್ದ. ಈ ಹಿನ್ನೆಲೆಯಲ್ಲಿ ಕಾರ್ತಿಕ್ ಕುಟುಂಬದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.





