ಕಂದಾಯ ನಿರೀಕ್ಷಕರ ಕಚೇರಿಯಲ್ಲಿ ದಾಂಧಲೆ

ಶೇರ್ ಮಾಡಿ

ವಿಟ್ಲ ಕಂದಾಯ ನಿರೀಕ್ಷಕರ ಕಚೇರಿಯಲ್ಲಿ ನಡೆದ ದಾಂಧಲೆಯಲ್ಲಿ ಮೇಜಿನ ಗಾಜು ಪುಡಿಯಾಗಿದೆ. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ ಪೊಲೀಸರು ಸ್ಥಳಕ್ಕಾಗಮಿಸಿ ಬಂದೋಬಸ್ತು ವ್ಯವಸ್ಥೆ ಮಾಡಿದ್ದಾರೆ.

ವೀರಕಂಭ ನಿವಾಸಿ ಶೇಖ್‌ ಶಿಬಾನ್‌ ಅವರು ಇತ್ತೀಚೆಗೆ ಸರಕಾರಿ ಜಾಗದಲ್ಲಿ ನೂತನ ಮನೆ ನಿರ್ಮಾಣ ಮಾಡಿದ್ದರು. ಅಡಿ ಸ್ಥಳವನ್ನು ತಮ್ಮ ಹೆಸರಿಗೆ ಮಾಡಿಕೊಳ್ಳುವ ನಿಟ್ಟಿನಲ್ಲಿ 94ಸಿ ಅಡಿಯಲ್ಲಿ ಅರ್ಜಿಯನ್ನು ಸಲ್ಲಿಸಿದ್ದರು. ಕಂದಾಯ ಅಧಿಕಾರಿಗಳು ಸ್ಥಳ ತನಿಖೆಯನ್ನು ನಡೆಸಿ ವರದಿ ಸಲ್ಲಿಸುವ ಸಂದರ್ಭದಲ್ಲಿ ಮನೆ ಅರಣ್ಯ ಇಲಾಖೆಯಿಂದ ನಿರ್ದಿಷ್ಟ ದೂರದಲ್ಲಿದ್ದು, ಅಲ್ಲಿಂದ ಒಪ್ಪಿಗೆ ಪಡೆಯುವ ಬಗ್ಗೆ ಷರಾ ಬರೆದಿದ್ದಾರೆ.

ಅಧಿಕಾರಿಗಳು ಅದಕ್ಕೆ ಒಪ್ಪಿಗೆ ಸೂಚಿಸದ ಹಿನ್ನಲೆಯಲ್ಲಿ ರಾಜಕಾರಣಿಯೊಬ್ಬರು ಬೆಂಬಲಿಗರ ಜತೆಗೆ ವಿಟ್ಲದ ಅರ್‌ಐ ಕಚೇರಿಗೆ ಆಗಮಿಸಿ ಸರಕಾರಿ ಅಧಿಕಾರಿಯನ್ನು ಪ್ರಶ್ನಿಸಿ ಮೇಜಿಗೆ ಗುದ್ದಿ ದಾಂಧಲೆ ನಡೆಸಿದ್ದು, ಈ ವೇಳೆ ಮೇಜಿನ ಮೇಲೆ ಹಾಸಲಾಗಿದ್ದ ಗಾಜು ಪುಡಿ ಪುಡಿಯಾಗಿದೆ. ಮಾಹಿತಿ ಪಡೆದ ವಿಟ್ಲ ಪೊಲೀಸರು ಸ್ಥಳಕ್ಕೆ ಆಗಮಿಸಿ ಗುಂಪನ್ನು ಚದುರಿಸಿದ್ದಾರೆ.

Leave a Reply

error: Content is protected !!